ಬೆಂಗಳೂರು: ನಿಲ್ಲದ ‘ಡಿಜಿಟಲ್ ಅರೆಸ್ಟ್ ಸುಲಿಗೆ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಮಾರ್ಚ್ 9ರಂದು ಪ್ರಕಟವಾದ ವರದಿಯನ್ನು ವಿಧಾನ ಪರಿಷತ್ನಲ್ಲಿ ಪ್ರಸ್ತಾಪಿಸಿದ ಕಿಶೋರ್ ಕುಮಾರ್ ಪುತ್ತೂರು, ಆನ್ಲೈನ್ ವಂಚನೆ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಆರ್ಥಿಕ ವಂಚನೆಯ ಪ್ರಕರಣಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕು. ಸೈಬರ್ ಅಪರಾಧ ಠಾಣೆಗಳಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳನ್ನು ತ್ವರಿತವಾಗಿ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಬೇಕು. ಸೈಬರ್ ಅಪರಾಧ ಠಾಣೆಗಳಿಗೆ ಅಗತ್ಯ ಸಿಬ್ಬಂದಿಯನ್ನೂ ನೇಮಿಸಬೇಕು ಎಂದು ಕೋರಿದರು.

ವೈಟ್ಫೀಲ್ಡ್ನ ಇ.ಸಿ.ಸಿ ರಸ್ತೆಯ ಲಕ್ಷ್ಮಿ ಎನ್ಕ್ಲೇವ್ ಅಪಾರ್ಟ್ಮೆಂಟ್ನಲ್ಲಿ ನೆಲಸಿರುವ 64 ವರ್ಷದ ವೃದ್ದರೊಬ್ಬರಿಗೆ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಂಚಕರು ಬೆದರಿಸಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ್ದ ಸಂಬಂಧಿಸಿದಂತೆ ಪ್ರಕಟವಾಗಿದ್ದ ವರದಿಯನ್ನು ಕಿಶೋರ್ ಪ್ರಸ್ತಾಪಿಸಿದರು.

‘ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 1,655 ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಂಚನೆ ಪ್ರಕರಣಗಳು ನಡೆದಿದ್ದು, ₹372 ಕೋಟಿಯಷ್ಟು ವಂಚನೆ ನಡೆದಿದೆ. 1,372 ಪ್ರಕರಣಗಳಲ್ಲಿ ಆರೋಪಿಗಳು ಪತ್ತೆ ಆಗಿಲ್ಲ. ₹339 ಕೋಟಿ ಜಪ್ತಿ ಮಾಡಿಕೊಳ್ಳುವುದು ಬಾಕಿಯಿದೆ’ ಎಂದು ಕಿಶೋರ್ ಪ್ರಶ್ನೆಗೆ ರಾಜ್ಯ ಸರ್ಕಾರ ಉತ್ತರಿಸಿದೆ.

ಕಳೆದ ಮೂರು ವರ್ಷಗಳಲ್ಲಿ 59,626 ಇತರೆ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಆ ಪೈಕಿ 48,173 ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಯಾಗಿಲ್ಲ ಎಂದು ಸರ್ಕಾರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.