ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನ ಕಾಶ್ಮಿರ ಮೂಲದ ಮೂವರು ವಿದ್ಯಾರ್ಥಿಗಳು 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ವಿಡಿಯೊ ವೈರಲ್ ಆಗಿದೆ.

ಸಿವಿಲ್ ವಿಭಾಗದಲ್ಲಿ ಓದುತ್ತಿರುವ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಹೇಳಲಾಗಿದೆ. ಪುಲ್ವಾಮಾ ದಾಳಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳು ವಿಡಿಯೊ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಪ್ರಾಚಾರ್ಯ ಡಾ. ಬಸವರಾಜ ಆನಾಮಿ, 'ಸರ್ಕಾರಿ ಕೋಟಾದ ಅಡಿ ಮೂವರು ಕಾಶ್ಮಿರಿ ವಿದ್ಯಾರ್ಥಿಗಳು ಸೀಟು ಪಡೆದಿದ್ದರು. ವಿದ್ಯಾರ್ಥಿಗಳ ವಿಡಿಯೊ ಗಮನಿಸಿ ಪೊಲೀಸರಿಗೆ ನಾವೇ ಮಾಹಿತಿ ನೀಡಿದ್ದೇವೆ. ಅವರ ಮೇಲೆ ಕಾನೂನು ಕ್ರಮ ಕೈಗೊಂಡು ಅಮಾನತು ಮಾಡಲಾಗುವುದು' ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಗೋಕುಲ ಠಾಣೆ ಪೊಲೀಸರು ಆಗಮಿಸಿ, ವಿದ್ಯಾರ್ಥಿಗಳಿಂದ ಹಾಗೂ ಪ್ರಾಚಾರ್ಯರಿಂದ ಮಾಹಿತಿ ಪಡೆಯುತ್ತಿದ್ದಾರೆ. ಬಜರಂಗ ದಳದ ಕಾರ್ಯಕರ್ತರು ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.