ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಪ್ರಚಾರ: ಆಜ್ ತಕ್ ಸುದ್ದಿ ವಾಹಿನಿ, ಮುಖ್ಯ ಸಂಪಾದಕರ ವಿರುದ್ಧ ಎಫ್‌ಐಆರ್

ಸುಳ್ಳು ಸುದ್ದಿ, ಅಪಪ್ರಚಾರ ಉದ್ದೇಶ ಎಂದು ಉಲ್ಲೇಖ
Published 13 ಸೆಪ್ಟೆಂಬರ್ 2023, 6:09 IST
Last Updated 13 ಸೆಪ್ಟೆಂಬರ್ 2023, 6:09 IST
ಅಕ್ಷರ ಗಾತ್ರ

ಬೆಂಗಳೂರು: ಆಜ್ ತಕ್ ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ, ನೀಡಿದ ದೂರಿನ ಸಂಬಂಧ ವಾಹಿನಿಯ ಆಡಳಿತ ಮಂಡಳಿ ಹಾಗೂ ವಾಹಿನಿ ಪ್ರಧಾನ ಸಂಪಾದಕ ಸುದೀರ್ ಚೌಧರಿ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ನಿಗಮದ ಸಹಾಯಕ ಆಡಳಿತಾಧಿಕಾರಿ ಶಿವಕುಮಾರ್ ಅವರು ದೂರು ನೀಡಿದ್ದರು. 

ನಿಗಮದ ಸಹಾಯಕ ಆಡಳಿತಾಧಿಕಾರಿ ಶಿವಕುಮಾರ್ ಅವರು ದೂರು ನೀಡಿದ್ದರು. 

ನಿರುದ್ಯೋಗಿ ಯುವಕರಿಗೆ ಸ್ವಾವಲಂಬಿ ಬದುಕಿಗೆ ಆಟೊ, ಟ್ಯಾಕ್ಸಿ ಖರೀದಿಗೆ ಗರಿಷ್ಠ ₹ 3 ಲಕ್ಷದವರೆಗೆ ಸಬ್ಸಿಡಿ ನೀಡುವ ಯೋಜನೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲೂ ಇದೆ. ಅಲ್ಪಸಂಖ್ಯಾತ ಸಮುದಾಯ ಅಷ್ಟೇ ಅಲ್ಲದೆ ಹಿಂದುಳಿದ, ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸೇರಿ ಹಿಂದೂ ಸಮುದಾಯದ ನಿರುದ್ಯೋಗಿ ಯುವಕರಿಗೂ ಅನುಷ್ಠಾನದಲ್ಲಿದೆ. ವಾಹಿನಿಯಲ್ಲಿ ಇದನ್ನು ತಿರುಚಿ ಈ ಯೋಜನೆ ಕೇವಲ ಮುಸ್ಲಿಂ ಸಮುದಾಯಕ್ಕಷ್ಟೇ ಜಾರಿಯಲ್ಲಿದೆ. ಹಿಂದೂಗಳಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಸೆ.11ರಂದು ವರದಿ ಪ್ರಸಾರ ಮಾಡಲಾಗಿದೆ. ಸಮಾಜದಲ್ಲಿ ಕೋಮು ಭಾವನೆ ಮೂಡಿಸುವ ಉದ್ದೇಶದಿಂದ ವರದಿ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT