ಉತ್ಪನ್ನಗಳ ಮೇಲೆ ಕ್ಯೂಆರ್ ಕೋಡ್
ಕೆಎಂಎಫ್‌ನ ಎಲ್ಲ ಉತ್ಪನ್ನಗಳ ಮೇಲೂ ಕ್ಯೂಆರ್ ಕೋಡ್ ಅಂಟಿಸಲಾಗುವುದು. ಅದರಲ್ಲಿ ಉತ್ಪನ್ನಗಳ ಸಂಪೂರ್ಣ ಮಾಹಿತಿ ಇರುತ್ತದೆ. ಇದರಿಂದ ಅಸಲಿ ಯಾವುದು ನಕಲಿ ಯಾವುದು ಎಂಬುದನ್ನು ಗ್ರಾಹಕರು ತಿಳಿದುಕೊಳ್ಳಬಹುದು ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ತಿಳಿಸಿದರು. ನಕಲಿ ಮತ್ತು ಕಲಬೆರಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.