ಬೆಂಗಳೂರು:ಕರ್ನಾಟಕ ಹಾಲು ಒಕ್ಕೂಟಗಳ ಮಹಾಮಂಡಳಿ(ಕೆಎಂಎಫ್) ಅಧ್ಯಕ್ಷರಾಗಿ ಬಿಜೆಪಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟು, ತೀವ್ರ ಲಾಬಿ ನಡೆಸಿದ್ದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆದರು.ಹಿಂದೆ ಅವರು ಎರಡು ಬಾರಿ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ:'ಗೌಡರ ಕುಟುಂಬದಿಂದ ಹಾಲು ಉತ್ಪಾದಕರಿಗೆ ತೊಂದರೆ ಆಗಬಾರದು': ರೇವಣ್ಣ

ಬಾಲಚಂದ್ರ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

‘ಕೆಎಂಎಫ್‌ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ನೇತೃತ್ವದಲ್ಲಿ ಕೆಎಂಎಫ್ ಉತ್ತಮವಾಗಿ ಕಾರ್ಯ ನಿರ್ವಹಿಸಿ, ಹಾಲು ಉತ್ಪಾದಕ ರೈತರಿಗೆ ಮತ್ತು ಗ್ರಾಹಕರಿಬ್ಬರಿಗೂ ಲಾಭ ದೊರೆಯಲೆಂದು ಆಶಿಸುತ್ತೇನೆ‘ ಎಂದು ಟ್ವೀಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.