ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಂಎಫ್‌: ಆಯ್ಕೆ ಪಟ್ಟಿ–ಮಧ್ಯಂತರ ಆದೇಶ ತೆರವು

Last Updated 20 ಏಪ್ರಿಲ್ 2023, 23:15 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) 487 ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲು ವಿಧಿಸಿದ್ದ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದೆ. ಇದೇ ವೇಳೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಕೆಎಂಎಫ್‌ಗೆ ಅನುಮತಿಸಲಾಗಿದ್ದು, ‘ಈ ಆದೇಶ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ’ ಎಂದು ಸ್ಪಷ್ಟಪಡಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಐತಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಸೇರಿದಂತೆ ಐದು ಸಂಘಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

‘2023ರ ಮಾರ್ಚ್ 17ರಂದು ನೇಮಕಾತಿಯ ಅಂತಿಮ ಪ್ರಕಟಿಸುವುದಕ್ಕೆ ನಿರ್ಬಂಧಿಸಿದ್ದ ಆದೇಶದಲ್ಲಿ ಮಾರ್ಪಾಡು ಮಾಡಲಾಗಿದೆ. ಅಂತಿಮ ಆಯ್ಕೆ ಪಟ್ಟಿಯನ್ನು ಕೆಎಂಎಫ್‌ ಪ್ರಕಟಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬಹುದಾಗಿದ್ದು, ಅದರಲ್ಲಿ ನೇಮಕಾತಿಯು ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಉಲ್ಲೇಖಿಸಬೇಕು’ ಎಂದು ನ್ಯಾಯಪೀಠ ಹೇಳಿದೆ.

ಕೆಎಂಎಫ್‌ ಪರ ಹಿರಿಯ ವಕೀಲ ಎಸ್‌.ಎಸ್‌. ನಾಗಾನಂದ, ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್.ರವಿ
ಶಂಕರ್ ಹಾಗೂ 3ನೇ ಪ್ರತಿವಾದಿ ಗುಜರಾತ್‌ನ ಆನಂದ್‌ ಜಿಲ್ಲೆಯ ಗ್ರಾಮೀಣ ನಿರ್ವಹಣೆ ಸಂಸ್ಥೆ (ಐಎಂಆರ್‌ಎ)ಯ ಪರ ಹಿರಿಯ ವಕೀಲ ಉದಯ್‌ ಹೊಳ್ಳ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT