ಮಧುಗಿರಿ: ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ರಾಜಣ್ಣ ಅಭಿಮಾನಿಗಳು, ಬೆಂಬಲಿಗರು ಮಂಗಳವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.

ರಾಜಣ್ಣ ಅಭಿಮಾನಿ ಶಿವಲಿಂಗ ಎಂಬುವರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳದಲ್ಲಿದ್ದವರು ತಡೆದು ಸಮಾಧಾನಪಡಿಸಿದರು.

ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಪಟ್ಟಣದ ಎಂ.ಎನ್.ಕೆ ಸಮುದಾಯ ಭವನದಲ್ಲಿ ಜಮಾವಣೆಗೊಂಡರು. ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದನ್ನು ಖಂಡಿಸಿದರು. ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮಧ್ಯಾಹ್ನ 1 ಗಂಟೆಯಿಂದ ಪಟ್ಟಣ ಬಂದ್ಗೆ ಕರೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.