ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣೆ ರಾಜಕೀಯದಿಂದ ಹಿಂದೆ ಸರಿದ ಕೆ.ಎನ್.ರಾಜಣ್ಣ

Published : 14 ಸೆಪ್ಟೆಂಬರ್ 2024, 5:39 IST
Last Updated : 14 ಸೆಪ್ಟೆಂಬರ್ 2024, 5:39 IST
ಫಾಲೋ ಮಾಡಿ
Comments

ತುಮಕೂರು: ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿರುವುದಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಲ್ಲಿ ಶನಿವಾರ ಪ್ರಕಟಿಸಿದರು.

‘ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಬೇಕಾದವರನ್ನು ಗೆಲ್ಲಿಸುವುದು, ಬೇಡದವರನ್ನು ಸೋಲಿಸುವ ಕೆಲಸ ಮಾಡುತ್ತೇನೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ನಾನು ಪ್ರತಿನಿಧಿಸುವ ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವ ಪ್ರಯತ್ನ ಮುಂದುವರಿಸುತ್ತೇನೆ. ನನ್ನ ಅಧಿಕಾರ ಮುಗಿಯುವುದರ ಒಳಗೆ ಜಿಲ್ಲಾ ಕೇಂದ್ರ ಮಾಡಿಸುತ್ತೇನೆ. ಜತೆಗೆ ಇತರೆ ಅಭಿವೃದ್ಧಿ ಕೆಲಸಗಳನ್ನು ಮಾಡಿಸುತ್ತೇನೆ. ಮುಂದಿನ ಚುನಾವಣೆ ದೃಷ್ಟಿಯನ್ನು ಇಟ್ಟುಕೊಂಡು ಈ ಕೆಲಸ ಮಾಡಿಸುತ್ತಿಲ್ಲ. ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT