ಬೆಂಗಳೂರು: ‘ಯಲಹಂಕ ವ್ಯಾಪ್ತಿಯ ಕೋಗಿಲು ಲೇ ಔಟ್ ವ್ಯಾಪ್ತಿಯ ಫಕೀರ್ ಹಾಗೂ ವಸೀಂ ಕಾಲೋನಿಯಲ್ಲಿ ಜನರು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರೂ ಅವುಗಳನ್ನು ತೆರವುಗೊಳಿಸುವಾಗ ರಾಜ್ಯ ಸರ್ಕಾರ ಪೂರ್ವಭಾವಿ ಸಮೀಕ್ಷೆ ನಡೆಸಿ, ಪ್ರಕ್ರಿಯೆ ಪಾಲಿಸಬೇಕಿತ್ತು’ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.

‘ತೆರವು ಕಾರ್ಯಾಚರಣೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು, ಸಂತ್ರಸ್ತರಿಗೆ ಪುನರ್ವಸತಿ ಹಾಗೂ ಪರಿಹಾರ ನೀಡಲು ನಿರ್ದೇಶಿಸಬೇಕು’ ಎಂದು ಕೋರಿ ಈ ಪ್ರದೇಶದಲ್ಲಿ ವಾಸವಿದ್ದ ಝೈಬಾ ತಬಸ್ಸುಮ್, ರೆಹಾನ ಮತ್ತು ಅರೀಫಾ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘2018ರಲ್ಲಿ ಅಲ್ಲಿನ 40ಕ್ಕೂ ಹೆಚ್ಚು ನಿವಾಸಿಗಳಿಗೆ ಜಾಗವನ್ನು ತಾತ್ಕಾಲಿಕ ಹಂಚಿಕೆ ಮಾಡಿರುವ ಸಂಬಂಧ ಪತ್ರ ನೀಡಲಾಗಿದೆ ಎಂದು ಅರ್ಜಿದಾರರು ಹೇಳಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಉತ್ತರಿಸಬೇಕು’ ಎಂದು ನಿರ್ದೇಶಿಸಿ, ವಿಚಾರಣೆಯನ್ನು ಫೆಬ್ರುವರಿ 4ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ತೆರವು ಮಾಡುವುದಕ್ಕೆ 15 ದಿನ ಮುಂಚಿತವಾಗಿ ನೋಟಿಸ್ ನೀಡಬೇಕು ಎಂಬ ನಿಯಮ ಇದೆ. ಆದರೆ, ಅದನ್ನು ಪಾಲನೆ ಮಾಡಿಲ್ಲ’ ಎಂದು ದೂರಿದರು.

ಇದಕ್ಕೆ ಪ್ರತಿಯಾಗಿ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಆಕ್ಷೇಪಿತ ಸ್ಥಳವನ್ನು ಕಲ್ಲು ಕ್ವಾರಿಗೆ ನೀಡಲಾಗಿತ್ತು. ಪರವಾನಗಿ ಮುಗಿದ ಮೇಲೆ ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿಗಾಗಿ 14.03 ಎಕರೆ ಹಂಚಿಕೆ ಮಾಡಲಾಗಿತ್ತು. 2013, 2014ರ ನಂತರದ ವರ್ಷಗಳಲ್ಲಿ ಈ ಪ್ರದೇಶದಲ್ಲಿ ಎಷ್ಟೆಷ್ಟು ಮನೆಗಳು ಅಲ್ಲಿ ಅಕ್ರಮವಾಗಿ ತಲೆ ಎತ್ತಿದ್ದವು ಎಂಬುದರ ಉಪಗ್ರಹ ಚಿತ್ರಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಲಾಗಿದೆ’ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.