ಕಾನೂನು ಪ್ರಕಾರ ಕ್ರಮ: ಡಿಕೆಶಿ
‘ಕೋಗಿಲು ಗ್ರಾಮದಲ್ಲಿ ಸ್ಥಳೀಯ ವ್ಯಕ್ತಿಯೊಬ್ಬ ಹಣ ಪಡೆದುಕೊಂಡು ಗುಡಿಸಲು ನಿರ್ಮಿಸಿಕೊಳ್ಳಲು ಬಿಟ್ಟಿದ್ದಾನೆ. ಈ ಬಗ್ಗೆ ವರದಿ ತರಿಸಿಕೊಂಡಿದ್ದೇನೆ. ಇಲ್ಲಿ ಎಲ್ಲ ಸಮುದಾಯದವರೂ ಇದ್ದು ಕಾನೂನು ಪ್ರಕಾರವೇ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು ‘ಕೆ.ಸಿ.ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿ. ಅವರು ನಮಗೆ ಸಲಹೆ ನೀಡಬಾರದೆ? ಬಿಜೆಪಿ ರಾಷ್ಟ್ರೀಯ ನಾಯಕರು ನೀಡುವ ಸಲಹೆಯನ್ನು ರಾಜ್ಯ ನಾಯಕರು ಕೇಳುವುದಿಲ್ಲವೇ’ ಎಂದು ಅವರು ಪ್ರಶ್ನಿಸಿದರು.