ಬೆಂಗಳೂರು: ‘ಬಿಜೆಪಿಯಲ್ಲಿರುವ ಅನೇಕರು ಅನ್ಯ ಧರ್ಮಗಳಿಗೆ ಮತಾಂತರಗೊಂಡಿದ್ದರೂ, ಅಧಿಕಾರಕ್ಕಾಗಿ ತಾವು ಹಿಂದೂಗಳೆಂದು ನಂಬಿಸಿ ವಿವಿಧ ಆಯಕಟ್ಟಿನ ಸ್ಥಳಗಳಿಗೆ ನೇಮಕಗೊಂಡಿದ್ದಾರೆ. ಅವರನ್ನು ಗುರುತಿಸಿ ಪಕ್ಷದಿಂದ ಹೊರ ಹಾಕಬೇಕು’ ಎಂದು ಕೊಳದ ಮಠದ ಶಾಂತವೀರ ಸ್ವಾಮೀಜಿ
ಆಗ್ರಹಿಸಿದ್ದಾರೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವುಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ ತರಲು ಹೊರಟಿರುವುದು ಸ್ವಾಗತಾರ್ಹ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ, ಮತಾಂತರ ಪಿಡುಗುಬಿಜೆಪಿ ಅಂಗಳದಲ್ಲೇ ಇರುವುದು ಆಘಾತಕಾರಿ. ಹಿಂದೂಗಳ ಸೋಗಿನಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿರುವ ಮತಾಂತರಿಗಳಿಗೆ ಕಡಿವಾಣ ಹಾಕಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ಇಂತಹವರು ಸಾವಿರಾರು ಹಿಂದೂಗಳು ಮತಾಂತರಗೊಳ್ಳಲು ಕಾರಣವಾಗಿರುವ ಅಂಶ ನಮ್ಮ ಗಮನಕ್ಕೆ ಬಂದಿದೆ. ಇವರನ್ನು ಪತ್ತೆ ಹಚ್ಚಲು ಆಂತರಿಕ ಸತ್ಯಶೋಧನಾ ಸಮಿತಿಯೊಂದನ್ನು ರಚಿಸಿ, ಮತಾಂತರಿಗಳನ್ನು ತೊಲಗಿಸಬೇಕು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್, ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ವಿಶೇಷ ಗಮನಹರಿಸಬೇಕು’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.