ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕೋಲಾರ ಸಂಸದ ಎಂ. ಮಲ್ಲೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ‘ಕೃಷ್ಣಾ–ಪೆನ್ನಾರ್ ನದಿಗಳ ಜೋಡಣೆ ಮಾಡುವ ಯೋಜನೆಯ ಕರಡು ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಬೇಡ್ತಿ– ವರದಾ ನದಿ ಜೋಡಣೆಗೆ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ನೇತ್ರಾವತಿ–ಹೇಮಾವತಿ ನದಿಗಳ ಜೋಡಣೆಗೆ ಪೂರ್ವ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.