ಬಂಗಾರಪೇಟೆ: ‘ದೇಶವನ್ನೇ ಸಾಲದ ಸುಳಿಗೆ ದೂಡಿರುವ ಬಿಜೆಪಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ಯಾವುದೇ ನೈತಿಕ ಹಕ್ಕಿಲ್ಲ’ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಗುಡುಗಿದರು.

ನಗರದ ತಾಲ್ಲೂಕು ಆಡಳಿತ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಲ ರಾಮಯ್ಯ ಎಂದು ಟೀಕಿಸುವ ಬಿಜೆಪಿಯವರಿಗೆ ಯಾವ ನೈತಿಕತೆ ಇದೆ. 2014ರಲ್ಲಿ ಪ್ರಧಾನಿ ಮೋದಿಯವರು ಅಧಿಕಾರ ವಹಿಸಿಕೊಂಡಾಗ ದೇಶದ ಮೇಲಿದ್ದ ಸಾಲ ₹ 53.11 ಲಕ್ಷ ಕೋಟಿ. ಆದರೆ ಇಂದು ಅದು ₹218 ಲಕ್ಷ ಕೋಟಿಗೆ ತಲುಪಿದೆ. ಬಿಜೆಪಿ ಆಡಳಿತದ 12 ವರ್ಷಗಳಲ್ಲಿ ಬರೋಬ್ಬರಿ ₹ 165 ಲಕ್ಷ ಕೋಟಿ ಸಾಲ ಮಾಡಲಾಗಿದೆ. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಅತಿ ಹೆಚ್ಚು ಸಾಲ ಮಾಡಿರುವ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ’ ಎಂದು ವ್ಯಂಗ್ಯವಾಡಿದರು.

‘ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯದಿಂದ ರಾಜ್ಯದ ಜನತೆ ಅನುಭವಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ. ಸಿಲಿಂಡರ್ ಉತ್ಪಾದನೆ ಮತ್ತು ಪೂರೈಕೆಯ ಸಂಪೂರ್ಣ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ. ರಾಜ್ಯ ಸರ್ಕಾರಕ್ಕೆ ಇದರಲ್ಲಿ ಯಾವುದೇ ಪಾತ್ರವಿಲ್ಲ. ಸಮರ್ಪಕ ಪೂರೈಕೆಯಿಲ್ಲದೆ ಆಟೊ ಚಾಲಕರು, ಹೋಟೆಲ್ ಉದ್ಯಮಿಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

‘ಕಳೆದ 11 ವರ್ಷಗಳಿಂದ ಕೇಂದ್ರ ಸರ್ಕಾರವು ದೇಶದ ಇಂಧನ ಅನಿಲ ದಾಸ್ತಾನು ಸಾಮರ್ಥ್ಯವನ್ನು ಹೆಚ್ಚಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಅವರ ಆಡಳಿತಾತ್ಮಕ ವೈಫಲ್ಯವನ್ನು ಎತ್ತಿ ತೋರಿಸುತ್ತದೆ’ ಎಂದು ದೂರಿದರು.

‘ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿಯುತ್ತಿದೆ, ಇದು ದೇಶದ ಆರ್ಥಿಕ ಅಸ್ಥಿರತೆಗೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಅವಧಿಯಲ್ಲಿ 414 ಇದ್ದ ಎಲ್ಪಿಜಿ ಸಿಲಿಂಡರ್ ಬೆಲೆ ಇಂದು ಸಾವಿರದ ಗಡಿಯಲ್ಲಿದೆ. ಪೆಟ್ರೋಲ್ ಮತ್ತು ಡೀಸೆಲ್, ಎಲ್ಪಿಜಿ ದರ ನಿರಂತರವಾಗಿ ಏರಿಸುವ ಮೂಲಕ ಸಾಮಾನ್ಯ ಜನರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ’ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ಮುನಿರಾಜು, ಎ.ಬಾಬು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-18-908729920

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.