ಕೋಲಾರ: ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ವರ್ಷಗಳು ಕಳೆದಂತೆ ಹೆಚ್ಚಾಗುತ್ತಿದೆ. ಖಾಲಿ ಇರುವ 2.84 ಲಕ್ಷ ಹುದ್ದೆಗಳಿಗೆ ಸರ್ಕಾರ ಈ ಕೂಡಲೇ ನೇಮಕಾತಿ ಮಾಡಿ ನಿರುದ್ಯೋಗಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತುದಾರ ಎ.ಪ್ರಮೋದ್ ಕುಮಾರ್ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೇಮಕಾತಿ ವಿಷಯದಲ್ಲಿ ಸರ್ಕಾರ ಕೇವಲ ಭರವಸೆ ನೀಡಿ ಕಾಲಹರಣ ಮಾಡುತ್ತಿದೆಯೇ ಹೊರತು, ಅಧಿಸೂಚನೆ ಹೊರಡಿಸಿಲ್ಲ ಎಂದರು.

ನೇಮಕಾತಿ ವಿಳಂಬ ಧೋರಣೆ ಖಂಡಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಹೋರಾಟ ನಡೆಸಿದರೂ ಸರ್ಕಾರ ಮಣಿಯುತ್ತಿಲ್ಲ. ರಾಜ್ಯದ ಬಜೆಟ್ನಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸರ್ಕಾರ ತಿಳಿಸಿದೆ. ಕೇವಲ ಆಶ್ವಾಸನೆಗ ನೀಡುವುದನ್ನು ಬಿಟ್ಟು ತಕ್ಷಣ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಸಂಪನ್ಮೂಲ ವ್ಯಕ್ತಿ ಎಸ್.ಆರ್.ರಾಕೇಶ್, ‘ಸರ್ಕಾರವು ಕೇವಲ ಮೀಸಲಾತಿ, ಒಳಮೀಸಲಾತಿ ಎಂದು ಕಥೆ ಹೇಳಿ ನೇಮಕಾತಿ ಮಾಡದೆ ಕಾಲಹರಣ ಮಾಡುತ್ತಿದೆ. ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ’ ಎಂದು ದೂರಿದರು.

ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಜಿ.ಮುರಳಿ, ‘ಕೆಪಿಎಸ್ಸಿ ಪರೀಕ್ಷೆಗಳಲ್ಲಿ ನಿರಂತರ ಅಕ್ರಮಗಳ ಸದ್ದು ಕೇಳಿ ಬರುತ್ತಿದೆ. ತನಿಖೆ ಮಾಡಿ ಅಕ್ರಮ ಎಸಗಿದ ಯಾರೊಬ್ಬರನ್ನೂ ಬಿಡದೆ ಶಿಕ್ಷೆ ನೀಡಬೇಕು’ ಎಂದು ಆಗ್ರಹಿಸಿದರು.

ಬಿ.ಗೋಪಾಲ್, ಶಶಿಕುಮಾರ್, .ಪ್ರಸನ್ನ ಕುಮಾರ್,ಎಸ್. ಮುಕ್ತಾನಂದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-18-1381989462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.