ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಪ್ರಚಾರ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇರಲಿಲ್ಲ– ಮುನಿಯಪ್ಪ

Published 7 ಏಪ್ರಿಲ್ 2024, 16:15 IST
Last Updated 7 ಏಪ್ರಿಲ್ 2024, 16:15 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋಲಾರ ಲೋಕಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇರಲಿಲ್ಲ’ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಮುಳಬಾಗಿಲಿನ ಕುರುಡುಮಲೆ ದೇವಸ್ಥಾನದಿಂದ ಕಾಂಗ್ರೆಸ್‌ ಚುನಾವಣಾ ಯಾತ್ರೆ ‘ಪ್ರಜಾಧ್ವನಿ-2’ ಶನಿವಾರ ಆರಂಭಗೊಂಡಿದ್ದು, ಈ ಕಾರ್ಯಕ್ರಮಕ್ಕೆ ಮುನಿಯಪ್ಪ ಗೈರಾಗಿದ್ದರು.

ಈ ಬಗ್ಗೆ ಭಾನುವಾರ ಪ್ರತಿಕ್ರಿಯಿಸಿದ ಮುನಿಯಪ್ಪ, ‘ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ನನ್ನನ್ನು ಯಾರೂ ಆಹ್ವಾನಿಸಿಲ್ಲ. ಹೀಗಾಗಿ, ನಾನು ಹೋಗಲಿಲ್ಲ’ ಎಂದರು.

‘ನನಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಜವಾಬ್ದಾರಿ ವಹಿಸಿದ್ದಾರೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ’ ಎಂದರು.

ಕೋಲಾರ ಟಿಕೆಟ್‌ ವಿಚಾರದಲ್ಲಿ ಮುನಿಯಪ್ಪ ಮತ್ತು ಕೆ.ಆರ್. ರಮೇಶ್‍ ಕುಮಾರ್ ಬಣದ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಮೂರನೇ ಅಭ್ಯರ್ಥಿಗೆ ಕಾಂಗ್ರೆಸ್‌ ಹೈಕಮಾಂಡ್‌ ಕಣಕ್ಕಿಳಿಸಿದೆ. ಇದರಿಂದ ಮುನಿಯಪ್ಪ ಮುನಿಸಿಕೊಂಡಿದ್ದು, ಕೋಲಾರ ಕ್ಷೇತ್ರದಲ್ಲಿ ಅಭ್ಯರ್ಥಿ ಪರ ಪ್ರಚಾರದಿಂದ ದೂರ ಉಳಿದಿದ್ದಾರೆ. 

‘ಪ್ರಜಾಧ್ವನಿ- 2’ಗೆ ಚಾಲನೆ ನೀಡುವ ಸಂದರ್ಭದಲ್ಲಿ ರಮೇಶ್‍ ಕುಮಾರ್ ಬಣದ ಎಲ್ಲ ನಾಯಕರೂ ಹಾಜರಿದ್ದರು. ಆದರೆ, ಮುನಿಯಪ್ಪ ಮತ್ತು ಅವರ ಪುತ್ರಿ, ಶಾಸಕಿ ರೂಪಕಲಾ ಕಾರ್ಯಕ್ರಮಕ್ಕೆ ಗೈರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT