ಶ್ರೀನಿವಾಸಪುರ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮತ್ತು ಸಚಿವ ಜಮೀರ್ ಅಹಮದ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರು. ಅವರು ಎಂದಿಗೂ ಪಕ್ಷಕ್ಕೆ ದ್ರೋಹ ಬಗೆದವರಲ್ಲ ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್ ಹೇಳಿದರು.

ಪಟ್ಟಣದ ಪಿಎಲ್ಡಿ ಬ್ಯಾಂಕ್ನಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡರು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಸೀರ್ ಕೋಲಾರ ಜಿಲ್ಲೆಯಲ್ಲಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ನಾಯಕತ್ವ ಹೊಂದಿದ್ದಾರೆ. ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವುದು ತಪ್ಪು’ ಎಂದರು.

ಇಬ್ಬರೂ ಪ್ರಭಾವಿ ನಾಯಕರ ವಿರುದ್ಧ ಹೈಕಮಾಂಡ್ ಯಾವುದೇ ರೀತಿಯ ಶಿಸ್ತು ಕ್ರಮ ಜರುಗಿಸಬಾರದು ಎಂದು ಎಐಸಿಸಿ ಮತ್ತು ಕೆಪಿಸಿಸಿಗೆ ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡ ಅನೀಸ್ ಅಹಮದ್ ಮಾತನಾಡಿ, ‘ದಾವಣಗೆರೆ ಉಪಚುನಾವಣೆ ವಿಚಾರದಲ್ಲಿ ನಸೀರ್ ಅಹಮದ್ ಅವರ ಬಗ್ಗೆ ಹೈಕಮಾಂಡ್ಗೆ ತಪ್ಪು ತಿಳುವಳಿಕೆ ಉಂಟಾಗಿದೆ’ ಎಂದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಸಿಗದ ಕಾರಣಕ್ಕೆ ಅಸಮಾಧಾನ ಉಂಟಾಗಿದೆ ಎಂದು ನುಡಿದರು.

ಕೋಮುಲ್ ನಿರ್ದೇಶಕ ಕೆ.ಕೆ.ಮಂಜುನಾಥ್ ಮಾತನಾಡಿ, ‘ಇತ್ತೀಚಿನ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಈ ಇಬ್ಬರೂ ನಾಯಕರು ಶ್ರಮಿಸಿದ್ದಾರೆ’ ಎಂದರು.

ಹಿರಿಯ ನಾಯಕರ ಮೇಲೆ ಕ್ರಮ ಕೈಗೊಂಡರೆ ಕಾರ್ಯಕರ್ತರಲ್ಲಿ ತಪ್ಪು ಸಂದೇಶ ರವಾನೆಯಾಗಿ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಹೇಳಿದರು

ಅಲ್ಪಸಂಖ್ಯಾತ ಮುಖಂಡರು ಮಾತನಾಡಿ, ‘ಜಮೀರ್ ಮತ್ತು ನಸೀರ್ ನಮ್ಮ ಸಮುದಾಯದ ಎರಡು ಕಣ್ಣುಗಳಿದ್ದಂತೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 80 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತಗಳನ್ನು ಒಗ್ಗೂಡಿಸಿದ್ದಾರೆ. ಕೆಲವು ವ್ಯಕ್ತಿಗಳು ಹೈಕಮಾಂಡ್ಗೆ ತಪ್ಪು ಮಾಹಿತಿ ನೀಡಿ ಅವರ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾ ಸಮಯದಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸಹಜ. ಹಳೆಯ ವಿಚಾರಗಳನ್ನು ಇಟ್ಟುಕೊಂಡು ನಾಯಕರನ್ನು ಬಲಿಪಶು ಮಾಡಬಾರದು ಎಂದು ಒಕ್ಕೊರಲಿನ ಆಗ್ರಹ ವ್ಯಕ್ತವಾಯಿತು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ನಾಗದೇನಹಳ್ಳಿ ಸೀತಾರಾಮರೆಡ್ಡಿ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ವೆಂಕಟರೆಡ್ಡಿ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಕ್ಬರ್ ಷರೀಫ್, ಮಾಜಿ ಪುರಸಭೆ ಮಾಜಿ ಅಧ್ಯಕ್ಷ ಅನಿಸ್, ಮುಖಂಡರಾದ ಮುತ್ತಕಪಲ್ಲಿ ಸರ್ದಾರ್, ಯೂತ್ ಕಾಂಗ್ರೆಸ್ ಮುಖಂಡ ಮುಸಾವೀರ್, ಮುದಿಮಡುಗು ವಾಸು, ನಾಗದೇನಹಳ್ಳಿ ಶ್ರೀನಿವಾಸ್, ಪುಲಗೂರಕೋಟೆ ಮಂಜುನಾಥ್, ಕೊಡಿಚೆರುವು ವೆಂಕಟೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-18-1168749135

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.