ಚಿಂತಾಮಣಿ: ‘ಕೋಲಾರದ ನಜೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆ ಮಾಡಿರುವುದು ವೈಯಕ್ತಿಕವಾಗಿ ನೋವು ತಂದಿದೆ. ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ ಹೈಕಮಾಂಡ್ ತೀರ್ಮಾನವನ್ನು ನಾವು ಒಪ್ಪಿಕೊಳ್ಳಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ ಜಯಂತಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾವು ಮತ್ತು ನಜೀರ್ ಅಹ್ಮದ್ ರಾಜಕೀಯದಲ್ಲಿ ಒಟ್ಟಾಗಿ ಹೋರಾಟ ಮಾಡಿಕೊಂಡು ಬಂದವರು. ತಾಲ್ಲೂಕಿನ ಮುರುಗಮಲ್ಲ ದರ್ಗಾ ಅಭಿವೃದ್ಧಿಯ ವಿಚಾರದಲ್ಲಿ ನಜೀರ್ ಅಹ್ಮದ್ ಮತ್ತು ಜಮೀರ್ ಖಾನ್ ಹೆಚ್ಚಿನ ಸಹಕಾರ ನೀಡಿದ್ದಾರೆ. ದಾವಣಗೆರೆ ಉಪ ಚುನಾವಣೆ ವಿಚಾರದಲ್ಲಿ ಆಗಿರುವ ಬೆಳವಣಿಗೆಗಳ ಕುರಿತು ಮಾಹಿತಿ ಇಲ್ಲ’ ಎಂದರು.

‘ಪರಿಸ್ಥಿತಿ ಈ ಮಟ್ಟಕ್ಕೆ ಹೋಗಬಾರದಿತ್ತು. ಸದ್ಯಕ್ಕೆ ಅಸಮಾಧಾನ, ಬೇಜಾರು ಉಂಟಾಗಿದ್ದರೂ ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ. ಹೈಕಮಾಂಡ್ ಎಲ್ಲವನ್ನು ಸಮರ್ಪಕವಾಗಿ ನಿರ್ವಹಿಸಲಿದೆ. ನಜೀರ್ ಅಹ್ಮದ್ ಅವರನ್ನು ಭೇಟಿ ಮಾಡಿ ವಾಸ್ತವಾಂಶ ತಿಳಿದುಕೊಳ್ಳಲಿದ್ದೇನೆ. ಪರಿಸ್ಥಿತಿ ತಿಳಿಯಾಗಲಿದ್ದು ಮುಂದಿನ ದಿನಗಳಲ್ಲಿ ಎಲ್ಲ ಭಿನ್ನಾಭಿಪ್ರಾಯ ಇತ್ಯರ್ಥವಾಗಲಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-16-561030650

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.