ಶ್ರೀನಿವಾಸಪುರ: ‘ಇಂಧನ ಹಾಗೂ ಎಲ್ಪಿಜಿ ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಹಾಗೂ ನಾನು ಪೆಟ್ರೋಲಿಯಂ ಸಚಿವರಿಗೆ ಪತ್ರ ಬರೆದಿದ್ದೇವೆ. ಏ.10ರಂದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಹಾಗೂ ಖಾಸಗಿ ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಈ ಮೂಲಕ ಆಟೊ ಎಲ್ಪಿಜಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ’ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಇರಾನ್ ವಿರುದ್ಧ ಅಮೆರಿಕ, ಇಸ್ರೇಲ್ ಸಾರಿರುವ ಯುದ್ಧದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮೂರು ತಿಂಗಳ ಹಿಂದೆಯೇ ಮುನ್ಸೂಚನೆ ಇದ್ದರೂ ಸರಿಯಾದ ವ್ಯವಸ್ಥೆ ಮಾಡಿಕೊಳ್ಳದೆ ನಿರ್ಲಕ್ಷ್ಯ ವಹಿಸಿತು. ದೇಶದಲ್ಲಿ ಎಲ್ಪಿಜಿ ಬೆಲೆ ಏರಿಕೆ ಮತ್ತು ಕೊರತೆ ಉಂಟಾಗಲು ಕೇಂದ್ರದ ನೀತಿಗಳೇ ಕಾರಣ ಎಂದು ಆರೋಪಿಸಿದರು.

ರಾಜ್ಯವು ತೆರಿಗೆ ಸಂಗ್ರಹದಲ್ಲಿ ದೇಶದಲ್ಲೇ ಎರಡು ಸ್ಥಾನದಲ್ಲಿದ್ದರೂ ನಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಟೀಕಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-15-1216266946

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.