ಶಿಡ್ಲಘಟ್ಟ: ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಧರೆ ಫೌಂಡೇಶನ್ ಸಹಕಾರದೊಂದಿಗೆ ತಾಲ್ಲೂಕಿನ ಗೊರ್ಲಗುಮ್ಮನಹಳ್ಳಿ 11ನೇ ಮೈಲಿಯ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜಪಾನಿನ ಮಿಯಾವಾಕಿ ಪದ್ಧತಿಯಲ್ಲಿ 3000 ಸಸಿ ನೆಡಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಮಾತನಾಡಿ, ಕಾಲೇಜಿನ ಆವರಣದಲ್ಲಿ ಮಣ್ಣು ಅಷ್ಟು ಚೆನ್ನಾಗಿರದ ಕಾರಣ ನೆಟ್ಟ ಗಿಡ ಬೆಳೆಯುತ್ತಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದರು. ಅದಕ್ಕಾಗಿ ಆಳವಾಗಿ ಗುಂಡಿ ತೆಗೆದು ಸೂಕ್ತ ಗೊಬ್ಬರ ಹಾಕಿ, ಮಿಯಾವಾಕಿ ಪದ್ಧತಿಯಲ್ಲಿ ಗಿಡ ನೆಡುತ್ತಿದ್ದೇವೆ. ಕಡಿಮೆ ಜಾಗದಲ್ಲಿ ಸ್ಥಳೀಯ ಗಿಡಗಳನ್ನು ದಟ್ಟವಾಗಿ ನೆಡುವುದರಿಂದ ತ್ವರಿತ ಬೆಳವಣಿಗೆ ಮತ್ತು ದಟ್ಟತೆ ಸಾಧ್ಯವಾಗುತ್ತದೆ. ಮಿಯಾವಾಕಿ ಪದ್ಧತಿ ಜೈವಿಕ ವೈವಿಧ್ಯತೆಯನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಎಂದರು.

ಪಕ್ಷಿ, ದುಂಬಿ, ಚಿಟ್ಟೆ, ಇರುವೆಗಳಂತಹ ಸಾವಿರಾರು ಜೀವಿಗಳಿಗೆ ಆಶ್ರಯ ಮತ್ತು ಆಹಾರ ನೀಡುತ್ತದೆ. ಇಲ್ಲಿರುವ ವಿದ್ಯಾರ್ಥಿಗಳಿಗೂ ಉತ್ತಮ ಹಸಿರು ಪರಿಸರ ಸಿಗಲಿದೆ. ನೆಟ್ಟ ಗಿಡಗಳನ್ನು ಎರಡು ವರ್ಷ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪೋಷಿಸಿ, ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕಿದೆ ಎಂದು ಹೇಳಿದರು.

ಪ್ರಾಂಶುಪಾಲ ನಾರಾಯಣಸ್ವಾಮಿ ಮಾತನಾಡಿ, ಗ್ರಾಮ ಪಂಚಾಯಿತಿ ನೆರವಿನೊಂದಿಗೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಜೊತೆಗೂಡಿ ಗಿಡಗಳನ್ನು ನೀರು ಹಾಕಿ ಪೋಷಿಸುತ್ತೇವೆ ಎಂದು ಹೇಳಿದರು.

ರೈತ ಸಂಘದ ತಿಮ್ಮನಾಯಕನಹಳ್ಳಿ ಅರುಣ್ ಕುಮಾರ್, ಧರೆ ಫೌಂಡೇಶನ್ನ ಪ್ರಸನ್ನ, ವಕೀಲ ಶ್ರೀನಿವಾಸ್, ಲಕ್ಷ್ಮಿನರಸಿಂಹ, ಉಪನ್ಯಾಸಕ ಕುಮಾರ್, ಸೌಭಾಗ್ಯ, ಸ್ವಪ್ನ, ಪ್ರಮೀಳ, ಅಶೋಕ, ರವಿ, ಭೂಲಕ್ಷ್ಮಿದೇವಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-16-109879080

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.