ಕೋಲಾರ: ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವುದನ್ನು ನಾವು ವಿರೋಧಿಸುತ್ತಿಲ್ಲ. ಆದರೆ, ಮಹಿಳೆಯರ ಹೆಸರಿನಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಷಡ್ಯಂತ್ರವನ್ನಷ್ಟೇ ವಿರೋಧಿಸುತ್ತಿದ್ದೇವೆ ಎಂದು ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಿಳಾ ಮೀಸಲಾತಿ ಮಸೂದೆಯನ್ನು ಅವೈಜ್ಞಾನಿಕವಾಗಿ ಮಂಡಿಸಿ, ದೂರದೃಷ್ಟಿ ಇಲ್ಲದೆ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ಮಹಿಳೆಯರಿಗೆ ಸರಿಯಾದ ಆದ್ಯತೆ, ಸಾಮಾಜಿಕ ನ್ಯಾಯ ಸಿಗುತ್ತಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ವಿಚಾರವನ್ನೂ ಸೇರಿಸಿದ್ದು, ಹಲವಾರು ಲೋಪದೋಷಗಳಿಂದ ಕೂಡಿದೆ. ವಿರೋಧ ಪಕ್ಷಗಳ ಜೊತೆ ಚರ್ಚೆಯನ್ನೂ ನಡೆಸದೆ ಮಸೂದೆ ಜಾರಿಗೆ ಮುಂದಾದರು. ಹೀಗಾಗಿ, ಮಸೂದೆಗೆ ಒಪ್ಪಿಗೆ ಸಿಗುತ್ತಿಲ್ಲ’ ಎಂದರು.

ಸಂಸತ್ತಿನಲ್ಲಿ ಚರ್ಚೆಗೂ ಅವಕಾಶ ನೀಡದೆ ಏಕಾಏಕಿ ಮಂಡನೆ ಮಾಡಿದ್ದು ಯಾವ ನ್ಯಾಯ? ಶೇ 33 ಮೀಸಲಾತಿ ಬಿಲ್ ಮಾತ್ರವೇ ಮಂಡನೆ ಮಾಡಬೇಕಾಗಿತ್ತು. ಅದನ್ನು ಬಿಟ್ಟು ಕ್ಷೇತ್ರ ಪುನರ್ ವಿಂಗಡಣೆ ವಿಚಾರ ಕೈಗೆತ್ತಿಕೊಂಡಿದ್ದು ಏಕೆ? ಈಗ ಇರುವ 543 ಸ್ಥಾನಗಳಲ್ಲೇ ಮೊದಲು ಶೇ 33ರಷ್ಟು ಮೀಸಲಾತಿಯ ಅವಕಾಶ ನೀಡಲಿ. ಅದನ್ನು ಬಿಟ್ಟು ಸಂಖ್ಯೆ ಏರಿಕೆಯ ಅಗತ್ಯವಿಲ್ಲ ಎಂದರು.

ಕ್ಷೇತ್ರ ಪುನರ್ ವಿಂಗಡಣೆ ಜೊತೆಗೆ ಮಹಿಳಾ ಮೀಸಲಾತಿ ಜಾರಿ ಮಾಡಬಾರದು. 2023ರಲ್ಲಿ ಇದ್ದಂತೆಯೇ ಮೀಸಲಾತಿ ಜಾರಿಯಾಗಬೇಕು ಎಂದು ಆಗ್ರಹಿಸಿದರು.

ಮಹಿಳೆಯರಿಗೆ ಸದ್ಯ ಶಿಕ್ಷಣ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಸ್ಥಾನಮಾನ ಸರಿಯಾಗಿ ಸಿಗುತ್ತಿಲ್ಲ. ಅರ್ಹತೆಯಿಂದ ಮಾತ್ರ ಮಹಿಳೆಯರಿಗೆ ಸ್ಥಾನಮಾನ ಸಿಗುತ್ತದೆ, ಕುಟುಂಬದ ಕಾರಣಕ್ಕೆ ಸಿಗಲ್ಲ. ಸ್ವಂತ ಪರಿಶ್ರಮದಿಂದಲೇ ಮಹಿಳೆಯರಿಗೆ ಅವಕಾಶಗಳು ಸಿಗುತ್ತಿವೆಯೇ ಹೊರತು ಯಾರೂ ಅವಕಾಶ ಕಲ್ಪಿಸುತ್ತಿಲ್ಲ. ಮಸೂದೆಯಲ್ಲಿನ ಲೋಪದೋಷದ ಬಗ್ಗೆ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಈಗಾಗಲೇ ವ್ಯವಸ್ಥಿತವಾಗಿ ಅನೇಕ ಯೋಜನೆಗಳನ್ನು ಮಹಿಳೆಯರಿಗೆ ನೀಡಿದ್ದು, ಅವು ಪಾರದರ್ಶಕವಾಗಿ ತಲುಪಿವೆ. ಹೆಚ್ಚಿನ ಅವಕಾಶ ನೀಡಿ ಮಹಿಳೆಯರನ್ನು ಗೌರವಿಸುತ್ತಾ ಬಂದಿದೆ ಎಂದರು.

ಕಾಂಗ್ರೆಸ್ ಮುಖಂಡರಾದ ವಸಂತಾ ಕವಿತಾ ರೆಡ್ಡಿ ಮಾತನಾಡಿ, ‘ಮಹಿಳೆಯರ ಪರ ಹಲವಾರು ಕಾನೂನುಗಳನ್ನು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಜಾರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಮೋದಿ ಸರ್ಕಾರ ಮಹಿಳೆಯರ ಪರ ಏನು ಮಾಡಿದೆ? ಯಾವ ಯೋಜನೆ ಜಾರಿಗೆ ತಂದಿದೆ’ ಎಂದು ಪ್ರಶ್ನಿಸಿದರು.

ಸಂವಿಧಾನದಲ್ಲಿ ಎಲ್ಲರೂ ಸಮಾನರು. ಹೀಗಾಗಿ ಶೇ 33 ಅಲ್ಲ, ಶೇ 50ರಷ್ಟು ಮೀಸಲಾತಿ ಬೇಕು. ಮೊದಲು ಮಹಿಳಾ ಮೀಸಲಾತಿ ಜಾರಿ ಮಾಡಿ, ಆ ನಂತರವೇ ಕ್ಷೇತ್ರ ಪುನರ್ ವಿಂಗಡಣೆ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಹೇಮಾಮಾಲಿನಿ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಚಳವಳಿ ಹಮ್ಮಿಕೊಂಡಿದ್ದು, ಪ್ರತಿ ಗ್ರಾಮದಿಂದ ಹೆಣ್ಣುಮಕ್ಕಳು ಪತ್ರ ಬರೆಯಲಿದ್ದಾರೆ. ಸಂಸತ್ ಅಧಿವೇಶನ ನಡೆಯುವ ಮೊದಲೇ ಪೋಸ್ಟ್ ಕಾರ್ಡ್ ಕಳಿಸಲಾಗುವುದು’ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ, ಮಹಿಳಾ ಘಟಕದ ಭಾಗ್ಯಮ್ಮ, ಉಮಾದೇವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-18-245666639

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.