ಕೋಲಾರ: ಚಿತ್ರದುರ್ಗದಲ್ಲಿ ಮೇ 9ರಂದು ಯಡಿಯೂರಪ್ಪೋತ್ಸವ ನಡೆಯಲಿದೆ. ಇದು ರಾಜಕೀಯೇತರ ಕಾರ್ಯಕ್ರಮವಾಗಿದ್ದು, ಸುಮಾರು ಐದರಿಂದ ಎಂಟು ಲಕ್ಷ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ರಾಜಕೀಯ ಪ್ರವೇಶ ಮಾಡಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಉತ್ಸವ ಹಮ್ಮಿಕೊಳ್ಳಲಾಗಿದೆ. ಅವರನ್ನು ನಾನು 1978ರಿಂದ ನೋಡಿಕೊಂಡು ಬೆಳೆದಿದ್ದೇನೆ. ಅವರಿಂದ ಸ್ಫೂರ್ತಿ ಪಡೆದಿದ್ದೇನೆ, ಅವರ ಹೋರಾಟಗಳಲ್ಲಿ ನಾನೂ ಭಾಗವಹಿಸಿದ್ದೇನೆ. ಭಾಗಲಕ್ಷ್ಮಿ ಯೋಜನೆ ಜಾರಿ ಮಾಡಿದ ಧೀಮಂತ ನಾಯಕ, ರಾಜ್ಯದ ದೊಡ್ಡ ಶಕ್ತಿ. ಈಗ ಅವರು ನಮ್ಮೆಲ್ಲರ ಮಾರ್ಗದರ್ಶಕ’ ಎಂದು ಬಣ್ಣಿಸಿದರು.

ವಿಧಾನಸಭೆಯಲ್ಲಿ ಯಡಿಯೂರಪ್ಪ ಅವರಂಥ ನಾಯಕರ ಕೊರತೆಯಿಂದ ಬಿಜೆಪಿ ದುರ್ಬಲವಾಗಿದೆಯೇ ಎಂಬ ಪ್ರಶ್ನೆಗೆ, ‘ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುವುದು ಎಂಬ ಮಾತಿತ್ತು. ಇದು ಅವರ ಸಾಮರ್ಥ್ಯಕ್ಕೆ ಸಾಕ್ಷಿ. ಈಗಲೂ ಆರ್.ಅಶೋಕ, ಚಲವಾದಿ ನಾರಾಯಣಸ್ವಾಮಿ ಅವರಂಥ ನಾಯಕರು ಇದ್ದಾರೆ. ಶಕ್ತಿಮೀರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಯ ಅಂತಿಮ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿ, ‘ಮೊದಲು ಸಿನಿಮಾ ಬಿಡುಗಡೆ ಆಗಲಿ. ಆಮೇಲೆ ಕ್ಲೈಮ್ಯಾಕ್ಸೋ, ಆ್ಯಂಟಿ ಕ್ಲೈಮ್ಯಾಕ್ಸೋ ಗೊತ್ತಾಗಲಿದೆ’ ಎಂದು ಲೇವಡಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-18-557449735

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.