ಕೊಳ್ಳೇಗಾಲ: ‘ಪ್ರಮುಖ ರಾಜಕೀಯ ನಿರ್ಧಾರ ತೆಗೆದುಕೊಳ್ಳಲಾಗದ ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ದುರ್ಬಲವಾಗಿದ್ದು, ಶವ ಇದ್ದಂತೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಟೀಕಿಸಿದರು.

ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ‘ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದ್ದು ರಾಜ್ಯದಲ್ಲಿ ಸಿದ್ದರಾಮಯ್ಯ ಅವರಿಂದ ಉಳಿದುಕೊಂಡಿದೆ. ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಕೊನೆಯ ಹಂತದಲ್ಲಿದ್ದು, ಅವರ ನಂತರ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ’ ಎಂದರು.

‘8 ದಶಕಗಳಿಂದ ದಲಿತ ಮುಖ್ಯಮಂತ್ರಿ ಕೂಗು ಕೇಳಿ ಬರುತ್ತಿದ್ದರೂ ಸಕಾರಗೊಂಡಿಲ್ಲ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಕಾಂಗ್ರೆಸ್, ದಲಿತರಿಗೆ ಅನ್ಯಾಯ ಮಾಡಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯನ್ನೂ ನೀಡುವುದಿಲ್ಲ’ ಎಂದು ತಿಳಿಸಿದರು.

‘ಕಾಂಗ್ರೆಸ್ ಪಕ್ಷಕ್ಕೆ 50 ವರ್ಷ ದುಡಿದಿರುವ ದಲಿತ ನಾಯಕರಿದ್ದರೂ ಪಕ್ಷ ಸೇರಿದ 6 ವರ್ಷಗಳಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಮುಂದೆಯೂ ಕಾಂಗ್ರೆಸ್ನಲ್ಲಿ ದಲಿತರು ಮುಖ್ಯಮಂತ್ರಿಯಾಗುವುದಿಲ್ಲ; ಆದರೆ, ಸಂತೋಷ’ ಎಂದರು.

‘ಹಿಂದಿನ ಸರ್ಕಾರಗಳು ನೀಡುತ್ತಿದ್ದ ಸವಲತ್ತುಗಳಿಗೆ ‘ಗ್ಯಾರಂಟಿ’ ಯೋಜನೆಗಳು ಎಂದು ಹೆಸರಿಟ್ಟಿರುವ ಕಾಂಗ್ರೆಸ್ ಬೋಗಸ್ ನಡೆಸುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ 2 ತಿಂಗಳು ಹಣ ಮಂಜೂರು ಮಾಡದೆ ₹ 5,000 ಕೋಟಿ ಅವ್ಯವಹಾರ ನಡೆಸಿದೆ, ಪಡಿತರ ಕಿಟ್ಗಳನ್ನು ವಿತರಣೆ ಮಾಡಿಲ್ಲ, ಎಲ್ಲರಿಗೂ 200 ಯುನಿಟ್ ವಿದ್ಯುತ್ ಸಿಗುತ್ತಿಲ್ಲ’ ಎಂದು ಆರೋಪಿಸಿದರು.

‘ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ಗೆ ದೇಶದ ಸಮಸ್ಯೆಯ ಅರಿವಿಲ್ಲ. ಅಮೆರಿಕಾ ಇರಾನ್ ಯುದ್ಧದ ಪರಿಣಾಮ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಗಗನಕ್ಕೇರಿದ್ದು, ಎಲ್ಲ ದೇಶಗಳು ಅನಿವಾರ್ಯವಾಗಿ ತೈಲ ಬೆಲೆ ಹೆಚ್ಚಿಸಿವೆ. ಭಾರತದಲ್ಲಿ ತೈಲ ಕಂಪೆನಿಗಳು ಅನುಭವಿಸುತ್ತಿದ್ದ ನಷ್ಟವನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಮುಂದಾಗಿದ್ದರಿಂದ ಬೆಲೆ ಹೆಚ್ಚಳವಾಗಿದೆ’ ಎಂದು ಸಮರ್ಥನೆ ನೀಡಿದರು.

‘ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ವಿಚಾರ ವರಿಷ್ಠರಿಗೆ ಬಿಟ್ಟಿದ್ದು. ಹಾಲಿ ಅಧ್ಯಕ್ಷರ ಅಧಿಕಾರಾವಧಿ ನವೆಂಬರ್ವರೆಗೂ ಮುಂದುವರಿಸಬೇಕೆ, ಬದಲಾವಣೆ ಮಾಡಬೇಕೆ ಎಂಬುದನ್ನು ವರಿಷ್ಠರು ನಿರ್ಧರಿಸಲಿದ್ದಾರೆ. ಕಾರ್ಯಕರ್ತರಿಂದ ಬಿಜೆಪಿ ಪಕ್ಷ ಇದೆಯೇ ಹೊರತು ನಾಯಕರಿಂದ ಪಕ್ಷ ಇಲ್ಲ. ಯಾರೇ ರಾಜ್ಯಾಧ್ಯಕ್ಷರಾದರೂ ಸಹಮತ ಇದೆ’ ಎಂದರು.

ಮಾಜಿ ಶಾಸಕ ಎಸ್.ಬಾಲರಾಜು, ಬಿಜೆಪಿ ಮುಖಂಡ ದತ್ತೇಶ್ ಕುಮಾರ್, ಸೋಮಣ್ಣ ಉಪ್ಪಾರ್, ಕೆ.ಕೆ.ಮೂರ್ತಿ, ಬೂದಿತಿಟ್ಟು ಶಿವಕುಮಾರ್, ಮಧುಚಂದ್ರ, ತೇಜು, ರಾಜೇಂದ್ರ, ರಾಜಶೇಖರ್, ಚರಣ್, ಚಂದು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-37-556987969

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.