ಗಂಗಾವತಿ: ಜಿಲ್ಲೆಯ ಕುಕನೂರು ಮತ್ತು ಕಾರಟಗಿ ತಾಲ್ಲೂಕುಗಳಲ್ಲಿ ಎರಡೂ ಜೆ.ಎಂ.ಎಫ್.ಸಿ ನ್ಯಾಯಾಲಯಗಳ ಕಟ್ಟಡ ನಿರ್ಮಾಣದ ಜೊತೆಗೆ ಸಿವಿಲ್ ನ್ಯಾಯಾಧೀಶರ ನೇಮಕಾತಿ ಮತ್ತು ನ್ಯಾಯಾಲಯಗಳಿಗೆ ಬೇಕಾದ ಅಗತ್ಯ 32 ಸಿಬ್ಬಂದಿ ನೇಮಕಕ್ಕೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿ ಜನರಿಗೆ ಸಿಹಿ ಸುದ್ದಿ ನೀಡಿದೆ.

2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ರಾಜ್ಯದ ನ್ಯಾಯಾಂಗ ವ್ಯವಸ್ಥೆ ಬಲಪಡಿಸಲು ಸರ್ಕಾರ ಒಂದು ಹೆಜ್ಜೆ ಮುಂದಿಟ್ಟು, ಕುಕನೂರು ಮತ್ತು ಕಾರಟಗಿ ತಾಲ್ಲೂಕಿಗಳಲ್ಲಿ ನೂತನ ನ್ಯಾಯಾಲಯಗಳ ಸ್ಥಾಪನೆಗೆ ಆದೇಶ ನೀಡಿ ₹50 ಕೋಟಿ ಅನುದಾನ ಮೀಸಲಿಟ್ಟಿದೆ. ಹಾಗೇ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲು ಹುದ್ದೆ ಮಂಜೂರು ಮಾಡಿದೆ.

ಪ್ರತಿ ನ್ಯಾಯಾಲಯಕ್ಕೆ ತಲಾ 16ರಂತೆ ಒಟ್ಟು 32 ಹುದ್ದೆಗಳನ್ನು ಸೃಜನೆ ಮಾಡಿದ್ದು, ಸಿವಿಲ್ ನ್ಯಾಯಾಧೀಶ, ಶಿರಸ್ತೇದಾರ್, ಶೀಘ್ರ ಲಿಪಿಗಾರ, ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಬೇಲಿಫ್, ಪ್ರೋಸೆಸ್ ಸರ್ವರ್ ಹುದ್ದೆಗಳನ್ನು ನೇಮಕಾತಿ ನಿಯಮಗಳನ್ವಯ ಭರ್ತಿ ಮಾಡಲಾಗುತ್ತಿದೆ. ಬೆರಳಚ್ಚುಗಾರ, ಅಟೆಂಡರ್ ಮತ್ತು ಜವಾನ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ. ಈ ನೂತನ ಹುದ್ದೆಗಳಿಗೆ ತಗಲುವ ವೆಚ್ಚವನ್ನು ಮೊದಲ ಮೂರು ವರ್ಷ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನಿಧಿಯಿಂದ ಭರಿಸಲು ನಿರ್ಧರಿಸಲಾಗಿದೆ. ನ್ಯಾಯಾಲಯದ ಕಟ್ಟಡ ನಿರ್ಮಾಣ ಕಾರ್ಯಕ್ಕೂ ಮಂಡಳಿಯ ಅನುದಾನವನ್ನೇ ಬಳಸಿಕೊಳ್ಳಲಾಗುತ್ತಿದೆ. ಕುಕನೂರು ಮತ್ತು ಕಾರಟಗಿ ತಾಲ್ಲೂಕು ಕೇಂದ್ರಗಳಾದ ನಂತರ, ಅಲ್ಲಿನ ಜನ ಸಣ್ಣಪುಟ್ಟ ನ್ಯಾಯಾಂಗ ಕೆಲಸಗಳಿಗೂ ನೆರೆಯ ತಾಲ್ಲೂಕುಗಳಿಗೆ ಅಲೆಯಬೇಕಾಗಿತ್ತು. ಈಗ ನ್ಯಾಯಾಲಯಗಳು ಕಾರ್ಯಾರಂಭ ಮಾಡುವುದರಿಂದ ಈ ಭಾಗದ ರೈತರು ಮತ್ತು ಸಾರ್ವಜನಿಕರಿಗೆ ಸ್ಥಳೀಯವಾಗಿಯೇ ತ್ವರಿತವಾಗಿ ನ್ಯಾಯ ದೊರಕಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-35-179427248

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.