ಕೊಪ್ಪಳ: ಇಲ್ಲಿನ ನಗರಸಭೆಯ ಕಿರಿಯ ಎಂಜಿನಿಯರ್ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದ್ದ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ. ಇದರಿಂದಾಗಿ ಅವರು ಇಲ್ಲಿಯೇ ಕರ್ತವ್ಯದಲ್ಲಿ ಮುಂದು ವರಿಯಲು ಅವಕಾಶ ಲಭಿಸಿದಂತಾಗಿದೆ.

ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ 336ಕ್ಕೂ ಅಧಿಕ ಕಾಮಗಾರಿಗಳಲ್ಲಿ ಬಹುತೇಕ ಕಾಮಗಾರಿಗಳನ್ನು ಮಾಡದೆ, ಅನುಷ್ಠಾನ ಮಾಡಿದ ಕಾಮಗಾರಿಗಳನ್ನು ತೀರಾ ಕಳಪೆ ಮಾಡಲಾಗಿದೆ. ಅಧಿಕಾರ ದುರಪಯೋಗ ಮಾಡಿಕೊಂಡು 2023–24 ಮತ್ತು 2024–25ನೇ ಸಾಲಿನಲ್ಲಿ ಅಂದಾಜು ₹10 ಕೋಟಿಗೂ ಅಧಿಕ ಮೊತ್ತದ ಹಣವನ್ನು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು 2025ರ ನವೆಂಬರ್ನಲ್ಲಿ ಇಲ್ಲಿನ ಲೋಕಾಯುಕ್ತ ಠಾಣೆಯಲ್ಲಿ ದೂರು ದಾಖಲಾಗಿತ್ತು. ಲೋಕಾಯುಕ್ತ ವರದಿ ಮೇರೆಗೆ ಅಮಾನತು ಮಾಡಿ ಸರ್ಕಾರ ಆದೇಶಿಸಿತ್ತು. ಆದರೆ ಮತ್ತೊಂದು ಆದೇಶ ಮಾಡಿರುವ ಪೌರಾಡಳಿತ ನಿರ್ದೇಶನಾಲಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮಲಿಂಗಪ್ಪ ಅವರು ಧಾರವಾಡ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, 2025ರ ಅಕ್ಟೋಬರ್ 14ರಂದು ಲೋಕಾಯಕ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ನ್ಯಾಯಾಲಯದ ಮಧ್ಯಂತರ ಆದೇಶದ ಬಗ್ಗೆ ನಿರ್ದೇಶನಾಲಯಕ್ಕೆ ಮಾಹಿತಿ ಇಲ್ಲದಿರುವುದು ಮತ್ತು ನಿರ್ದೇಶನಾಲಯವನ್ನು ಪ್ರತಿವಾದಿಯನ್ನಾಗಿಸಿಲ್ಲದ ಕಾರಣ ಲೋಕಾಯುಕ್ತರ ಪ್ರಸ್ತಾವದ ಮೇರೆಗೆ ಅಮಾನತು ಮಾಡಲಾಗಿತ್ತು. ಈಗ ಈ ಆದೇಶವನ್ನು ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಪೌರಾಡಳಿತ ನಿರ್ದೇಶನಾಲಯ ಪಿ.ಎನ್. ರವೀಂದ್ರ ತಮ್ಮ ಮರು ಆದೇಶದಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-35-800354109

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.