ಕೊಪ್ಪಳ: ‘ಹೆಚ್ಚುತ್ತಿರುವ ಬಿಸಿಲಿನ ಪ್ರಖರತೆ ಗಮನದಲ್ಲಿರಿಸಿಕೊಂಡು ನರೇಗಾ ಯೋಜನೆಯಲ್ಲಿ ದುಡಿಯುವ ಕಾರ್ಮಿಕರ ಕೆಲಸದ ಪ್ರಮಾಣದಲ್ಲಿ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಲಬುರಗಿ ಕಂದಾಯ ವಿಭಾಗದ ಎಲ್ಲ ಜಿಲ್ಲೆಗಳು ಹಾಗೂ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಬೇಸಿಗೆ ಉಷ್ಣಾಂಶ ಹೆಚ್ಚುತ್ತಿರುವ ಕಾರಣಕ್ಕೆ ಸರ್ಕಾರಿ ಕಚೇರಿಗಳ ಕೆಲಸದ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ. ನರೇಗಾದಲ್ಲಿ ಕಾರ್ಮಿಕರು ನಿಗದಿತ ಕೆಲಸದ ಪ್ರಮಾಣದಲ್ಲಿ ಕೆಲಸ ನಿರ್ವಹಿಸುವುದೂ ಬಿಸಿಲಿನ ತಾಪದಿಂದ ಕಷ್ಟವಾಗುತ್ತಿದೆ. ಹೀಗಾಗಿ ಬೇಸಿಗೆ ಅವಧಿಯ ಮೇ ತಿಂಗಳಿಗೆ ಅನ್ವಯವಾಗುವಂತೆ ದೈನಂದಿನ ಕೆಲಸದ ಪ್ರಮಾಣದಲ್ಲಿ ಶೇ 30ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಗ್ರಾಮೀಣ ಮತ್ತು ಪಂಚಾಯತ್ ರಾಜ್ ಇಲಾಖೆ ಹೊರಡಿಸಿದ ಆದೇಶದಲ್ಲಿ ವಿವರಿಸಲಾಗಿದೆ. ಬಿಸಿಲಿನ ತಾಪದಿಂದ ನರೇಗಾ ಕಾರ್ಮಿಕರು ಬಸವಳಿಯುತ್ತಿರುವುದು ಮತ್ತು ಅವರ ಆರೋಗ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ‘ನರೇಗಾ ಕೆಲಸ ಪ್ರಮಾಣಕ್ಕೆ ಸಿಗದ ವಿನಾಯಿತಿ’ ಶೀರ್ಷಿಕೆಯಲ್ಲಿ ಮೇ 2 ರಂದು ವಿಶೇಷ ವರದಿ ಮೂಲಕ ‘ಪ್ರಜಾವಾಣಿ’ ಸರ್ಕಾರದ ಗಮನಸೆಳೆದಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-19-1673392462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.