ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಇಂಧನ ಇಲಾಖೆಯ ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಯೋಜನೆಯ ಪ್ರಗತಿ ಪರಿಶೀಲನೆ ಮಂಗಳವಾರ ನಡೆಸಿದ ಅವರು, ‘ಯೋಜನೆಯ ವಾಸ್ತವಿಕ ಅನುಷ್ಠಾನ ಸರ್ಕಾರದ ಗುರಿ. ಹೀಗಾಗಿ, ಯೋಜನೆ ಜಾರಿಗೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವ ಜೊತೆಗೆ, ಎದುರಾಗುವ ಅಡೆತಡೆ ನಿವಾರಿಸಲು ನಿಯಮಗಳನ್ನು ಸರಳೀಕರಿಸಬೇಕು’ ಎಂದು ಸಲಹೆ ನೀಡಿದರು.

‘ಎಸ್ಕಾಂಗಳಲ್ಲಿ ಬಾಕಿ ಉಳಿದಿರುವ ಫಲಾನುಭವಿ ಕುಟುಂಬಗಳ ವಿದ್ಯುತ್ ಶುಲ್ಕ ವಸೂಲಿ ಮತ್ತು ಪರಿಹಾರ ಕ್ರಮಗಳಿಗೆ ಮಾರ್ಗೋಪಾಯ ಕಂಡುಕೊಳ್ಳಬೇಕು. ಆದರೆ, ಈ ಯೋಜನೆಯ ತ್ವರಿತ ಅನುಷ್ಠಾನ ಇಂದಿನ ಅಗತ್ಯ. ಡಿಬಿಟಿ ಹೊರತುಪಡಿಸಿ ಸರಳ ಮಾರ್ಗಗಳಲ್ಲಿ ಯೋಜನೆ ಜಾರಿ ಮಾಡಬೇಕು. ಅದಕ್ಕೆ ಪರ್ಯಾಯ ವ್ಯವಸ್ಥೆ ರೂಪಿಸಬೇಕು. ಈ ಯೋಜನೆಗೆ ಸರ್ಕಾರದಿಂದ ವಾರ್ಷಿಕ ₹ 800 ಕೋಟಿ ಅನುದಾನ ಲಭ್ಯವಾಗಲಿದೆ. ಮುಂದೆ ಈ ಮೊತ್ತ ಏರಿಕೆ ಆಗಲಿದೆ’ ಎಂದು ಅವರು ವಿವರಿಸಿದರು.

ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಕೆ. ರಾಕೇಶ್ ಕುಮಾರ್, ಸಲಹೆಗಾರ ಇ. ವೆಂಕಟಯ್ಯ, ಇ ಆಡಳಿತ ಇಲಾಖೆ ನಿರ್ದೇಶಕ ದಿಲೀಶ್ ಸಾಮಿ, ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.