ಬೆಂಗಳೂರು: ರಾಜ್ಯ ಸರ್ಕಾರ ಆರು ವರ್ಷಗಳಿಂದ ಪಂಚಾಯತ್ ಚುನಾವಣೆ ನಡೆಸದೇ ಇರುವ ಕಾರಣಕ್ಕೆ 15ನೇ ಹಣಕಾಸು ಯೋಜನೆ ಅಡಿ ಅನುದಾನ ಬಿಡುಗಡೆ ಆಗಿಲ್ಲ. ಆದರೆ, ರಾಜ್ಯ ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಕೇಂದ್ರ ವಿರುದ್ಧ ಅಪಪ್ರಚಾರ ನಡೆಸುತ್ತಿದೆ ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

15ನೇ ಹಣಕಾಸು ಅನುದಾನ ಬಿಡುಗಡೆಗೆ ಚುನಾವಣೆ ಮಾಡಬೇಕು ಎಂಬ ಷರತ್ತು ಪೂರೈಸದೇ ಇರುವುದು ಕಾರಣವೇ ಹೊರತು, ತಾರತಮ್ಯ ಕಾರಣವಲ್ಲ. ಆದರೆ ಕಾಂಗ್ರೆಸ್ ನಿರಾಧಾರ ಆರೋಪಗಳನ್ನು ಮಾಡುತ್ತಿದೆ ಎಂದು ಅವರು ದೂರಿದರು.

ಭ್ರಷ್ಟಾಚಾರ ನಿಯಂತ್ರಣ ಮತ್ತು ಪಾರದರ್ಶಕತೆ ತರಲು ಉದ್ಯೋಗ ಖಾತ್ರಿ ಯೋಜನೆಗೆ ಒಂದಿಷ್ಟು ಪರಿಷ್ಕರಣೆ ಮಾಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ. ಆದರೆ, ಇದರ ಬಗ್ಗೆ ಜನಸಾಮಾನ್ಯರಲ್ಲಿ ತಪ್ಪು ಕಲ್ಪನೆ ಮೂಡುವಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆ ವರ್ತಿಸುತ್ತಿರುವುದು ದುರದೃಷ್ಟಕರ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರ ತನ್ನ ಬಜೆಟ್ನಲ್ಲಿ ಕೇಂದ್ರಕ್ಕೆ ಪೂರಕವಾದ ರಾಜ್ಯದ ಪಾಲಿನ ಅನುದಾನ ಕಾದಿರಿಸಿ ಯೋಜನೆಯನ್ನು ಯಶಸ್ವಿಗೊಳಿಸಿದರೆ ಜನ ಸಾಮಾನ್ಯರಿಗೆ ಅನುಕೂಲ ಅಗುತ್ತದೆ. ಕಾರ್ಮಿಕರಿಗೆ ವೇತನವೂ ಬೇಗ ಸಿಗುತ್ತದೆ. ಅಪಪ್ರಚಾರ ಮಾಡುವುದನ್ನು ಬಿಟ್ಟು ಕೇಂದ್ರದ ಜತೆ ಸಹಭಾಗಿತ್ವದೊಂದಿಗೆ ಕೆಲಸ ಮಾಡಬೇಕು ಎಂದು ಪೂಜಾರಿ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.