ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟೂರು: ತರಳಬಾಳು ಹುಣ್ಣಿಮೆ ಮುಂದೂಡಿಕೆ

ಈ ಬಾರಿ ಸಾಮಾಜಿಕ ಜಾಲತಾಣದಲ್ಲಿ ಆಚರಿಸಲು ನಿರ್ಧಾರ
Last Updated 11 ಫೆಬ್ರುವರಿ 2021, 19:17 IST
ಅಕ್ಷರ ಗಾತ್ರ

ಸಿರಿಗೆರೆ: ಬಳ್ಳಾರಿ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಫೆಬ್ರುವರಿ 19ರಿಂದ 27ರವರೆಗೆ ನಡೆಯಬೇಕಿದ್ದ ಇಲ್ಲಿನ ತರಳಬಾಳು ಜಗದ್ಗುರು ಬೃಹನ್ಮಠದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಒಂದು ವರ್ಷ ಮುಂದೂಡಲಾಗಿದೆ ಎಂದು ತರಳಬಾಳು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದ ಎಲ್ಲೆಡೆ ಕೋವಿಡ್‌ ಪ್ರಭಾವ ಇರುವುದರಿಂದ ಈ ಕ್ರಮ ಅಗತ್ಯ ವಾಗಿದೆ. 9 ದಿನಗಳ ಕಾಲ ನಡೆಯುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ನಿತ್ಯವೂ ಸಾವಿರಾರು ಜನರು ಭಾಗಿಯಾಗುತ್ತಿದ್ದರು. ಕೋವಿಡ್‌ನಿಂದಾಗಿ ಭಕ್ತರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಾರದು ಎಂದು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT