ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜುಂಡಿ ಭೇಟಿಯಾದ ಡಿ.ಕೆ. ಶಿವಕುಮಾರ್

Published 7 ಏಪ್ರಿಲ್ 2024, 15:27 IST
Last Updated 7 ಏಪ್ರಿಲ್ 2024, 15:27 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಧಾನಪರಿಷತ್ ಬಿಜೆಪಿ ಸದಸ್ಯ ಕೆ.ಪಿ. ನಂಜುಂಡಿ ಜೊತೆ ಉಪಹಾರ ಕೂಟದಲ್ಲಿ ಭಾನುವಾರ ಜೊತೆಯಾಗುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

ವಿಶ್ವಕರ್ಮ ಸಮುದಾಯದ ಪ್ರಭಾವಿ ನಾಯಕರೂ ಆಗಿರುವ ‌ನಂಜುಂಡಿ, ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದರು. ಸೂಕ್ತ ಸ್ಥಾನಮಾನ ಸಿಗಲಿಲ್ಲವೆಂದು ಬಿಜೆಪಿಗೆ ವಲಸೆ ಹೋಗಿದ್ದರು. ಯಡಿಯೂರಪ್ಪ ಅವರು ನಂಜುಂಡಿಯನ್ನು ವಿಧಾನ ಪರಿಷತ್‍ ಸದಸ್ಯರನ್ನಾಗಿ ಮಾಡಿದ್ದರು. ಅವರ ಸದಸ್ಯತ್ವ ಅವಧಿ ಇದೇ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ.

ಲೋಕಸಭೆ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ನಾನಾ ತಂತ್ರಗಾರಿಕೆ ರೂಪಿಸುತ್ತಿರುವ ಡಿ.ಕೆ. ಶಿವಕುಮಾರ್ ಅವರು ನಂಜುಂಡಿ ಜೊತೆಗೆ ಚರ್ಚೆ ನಡೆಸಿದ್ದಾರೆ. ಅವರನ್ನು ಮತ್ತೆ ಕಾಂಗ್ರೆಸ್‌ ಕಡೆ ಸೆಳೆಯಲು ಶಿವಕುಮಾರ್‌ ಮುಂದಾಗಿದ್ದಾರೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT