ಮೈಸೂರು: ‘ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ನೀಡಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ತೀರ್ಮಾನವನ್ನು ಎಲ್ಲರೂ ಸ್ವಾಗತಿಸಿದ್ದಾರೆ. 101 ಜಾತಿಯವರೂ ಖುಷಿಪಟ್ಟಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯಲ್ಲಿರುವ ಬೆಂಕಿ ಹಚ್ಚುವ ಕೆಲವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಛಲವಾದಿ ನಾರಾಯಣಸ್ವಾಮಿ ಅವರಂತಹ ಅತೃಪ್ತ ಆತ್ಮಗಳನ್ನು ಬಿಟ್ಟರೆ ಉಳಿದವರೆಲ್ಲರೂ ಬಹಳ ತೃಪ್ತಿದಾಯಕ ನಿರ್ಧಾರ ಎಂದು ಹೇಳಿದ್ದಾರೆ. ಇದೊಂದು ಐತಿಹಾಸಿಕ ತೀರ್ಮಾನ’ ಎಂದು ಹೇಳಿದರು.

‘ದಲಿತ ಸಮುದಾಯಕ್ಕೆ ಸೇರಿದ ಎಲ್ಲ ಸಚಿವರೆಲ್ಲರ ಒಮ್ಮತದ ಅಭಿಪ್ರಾಯದಂತೆ ಹಂಚಿಕೆ ಮಾಡಲಾಗಿದೆ. ಈ ಹಿಂದೆ, ಚುನಾವಣೆಗೂ ಮುನ್ನ, ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಹೆಚ್ಚಿಸಿ, 9ನೇ ಶೆಡ್ಯೂಲ್ಗೆ ಸೇರಿಸದೆ ಹೋಗಿದ್ದರು. ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಅವರು ಮಾಡಿದ್ದರು. ಅದನ್ನು ನಾವು ಸರಿಪಡಿಸುತ್ತೇವೆ ಎಂದು ಆಶ್ವಾಸನೆಯನ್ನು 2023ನೇ ಜ.8ರಂದು ಕೊಟ್ಟಿದ್ದೆವು. ಪ್ರಣಾಳಿಕೆಯಲ್ಲೂ ಭರವಸೆ ನೀಡಿದ್ದೆವು. ನಂತರ, ಸುಪ್ರೀಂ ಕೋರ್ಟ್ ಕೂಡ ಹೇಳಿತ್ತು. ಅದರಂತೆ ನಾವು ನಡೆದುಕೊಂಡಿದ್ದೇವೆ’ ಎಂದು ತಿಳಿಸಿದರು.

ಎಲ್ಲರಿಗೂ ನ್ಯಾಯ ಸಿಗಲೆಂದು

‘ಶೇ 50ರಷ್ಟು ಮೀಸಲಾತಿ ಮೀರಬಾರದು ಎಂದು ನ್ಯಾಯಾಲಯ ಹೇಳಿದ್ದರಿಂದ, ಎಲ್ಲ ಸಮುದಾಯಗಳ ಮುಖಂಡರು, ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಿ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬ ಏಕೈಕ ಉದ್ದೇಶದಿಂದ ಬಲಗೈಗೆ ಶೇ 5.25, ಎಡಗೈಗೆ ಶೇ 5.25 ಹಾಗೂ ಸ್ಪೃಶ್ಯ ಅಲೆಮಾರಿಗಳಿಗೆ ಶೇ 4.5 ಒಳಮೀಸಲಾತಿ ಕೊಡಲು ತೀರ್ಮಾನವಾಗಿದೆ. 56,432 ಹುದ್ದೆಗಳ ಭರ್ತಿಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ’ ಎಂದು ಹೇಳಿದರು.

‘ನಮ್ಮ ಸರ್ಕಾರ ಈವರೆಗೆ 2.65 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿದೆ. ಈಗ, 56,432 ಹುದ್ದೆಗಳ ಭರ್ತಿಗೆ ಅಧಿಸೂಚನೆ ಆಗಲಿದೆ. ಆದರೆ, ಬಿಜೆಪಿಯವರು ಹಾಗೂ ಎಚ್.ಡಿ. ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಹುದ್ದೆ ಭರ್ತಿ ಮಾಡಿದ್ದರೆ ತಿಳಿಸಲಿ’ ಎಂದು ಸವಾಲು ಹಾಕಿದರು.

‘ಬಿಜೆಪಿಯವರು ಕಿಡಿ ಹೊತ್ತಿಸುವ ಕೆಲಸ ಮಾಡುತ್ತಾರೆ, ಅದನ್ನು ಜನರು ನಂಬಬಾರದು. ಮೀಸಲಾತಿಗೆ ವಿರುದ್ಧವಾಗಿರುವ ಪಕ್ಷವಿದ್ದರೆ ಅದು ಬಿಜೆಪಿ ಮಾತ್ರ. ದಲಿತರು ಮುಂದೆ ಬರಬಾರದು ಎಂಬ ಕಾರಣಕ್ಕೆ ಹುನ್ನಾರ ನಡೆಸುತ್ತಲೇ ಇರುತ್ತಾರೆ’ ಎಂದು ಆರೋಪಿಸಿದರು.

‘ಎಲ್ಲರಿಗೂ ಒಳಿತಿನ ತೀರ್ಮಾನ ಮಾಡಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪಕ್ಷದಿಂದ ಅಭಿನಂದನೆ ಸಲ್ಲಿಸಲಾಗುವುದು’ ಎಂದರು.

ಬಿಜೆಪಿ ಮಹಿಳಾ ಮೀಸಲಾತಿ ಪರ ಇಲ್ಲ

‘ಮಹಿಳಾ ಮೀಸಲಾತಿ ವಿಷಯದಲ್ಲಿ ಬಿಜೆಪಿಯವರು ನಾಟಕ ಆಡುತ್ತಿದ್ದಾರೆ. ಅವರು ಆ ಮೀಸಲಾತಿ ಪರ ಇಲ್ಲ’ ಎಂದು ಆರೋಪಿಸಿದರು.

‘ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಿಸಲಾಗಿದೆ, ಸಿಸಿಟಿವಿ ಕ್ಯಾಮೆರಾ ಆಫ್ ಮಾಡಿಸಿ ಅವ್ಯವಹಾರ ನಡೆಸಲಾಗಿದೆ ಎಂಬ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿಕೆ ಹಾಸ್ಯಾಸ್ಪದವಾದುದು. ಅನುಭವಿಯಾದ ಅವರ ಆರೋಪ ಶುದ್ಧ ಸುಳ್ಳು. ಶಿಕ್ಷಣ ಇಲಾಖೆಯಲ್ಲಿ ದೊಡ್ಡಮಟ್ಟದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಮಧು ಬಂಗಾರಪ್ಪ ಅವರು ಮಾಡಿದ್ದಾರೆ’ ಎಂದು ಶ್ಲಾಘಿಸಿದರು.

ಪಕ್ಷದ ನಗರ ಜಿಲ್ಲಾ ಸಮಿತಿಯ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.