ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಜೂನ್ 20 ರಿಂದ ಕರ್ನಾಟಕದಲ್ಲಿ ಆರಂಭಿಸುತ್ತಿರುವ ಮೂರನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ಎಂಟು ಪ್ರಮುಖ ಅಂಶಗಳತ್ತ ಗಮನ ಹರಿಸಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೆಪಿಸಿಸಿ ಪತ್ರ ಬರೆದಿದೆ.

ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಅವರು ಪತ್ರ ಬರೆದಿದ್ದಾರೆ.

‘ಕರ್ನಾಟಕದಲ್ಲಿ ಪ್ರಸ್ತುತ 5.55 ಕೋಟಿ ಮತದಾರರಿದ್ದಾರೆ. ಒಬ್ಬ ಅರ್ಹ ಮತದಾರನೂ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಕಟ್ಟುನಿಟ್ಟಿನ ಪರಿಷ್ಕರಣೆ ಮಾಡುವುದಾಗಿ ಆಯೋಗ ನೀಡಿರುವ ಆಶ್ವಾಸನೆಯನ್ನು ಉಳಿಸಿಕೊಳ್ಳಬೇಕು. ಸಂವಿಧಾನ, ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಮತದಾರರ ನೋಂದಣಿ ನಿಯಮದ ಅಡಿಯಲ್ಲಿ ಯಾವುದೇ ಅನಾಹುತಗಳಿಗೆ ಅವಕಾಶ ನೀಡದೆ, ಯಾವುದೇ ಧರ್ಮ ಅಥವಾ ವರ್ಗಗಳ ಮತದಾರರನ್ನು ಕೈಬಿಡದಂತೆ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

1951ರಿಂದ ಇಲ್ಲಿಯವರೆಗೆ ಎಂಟು ಬಾರಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆಗಿದೆ. ಆದರೆ, ಕಳೆದ 21 ವರ್ಷಗಳಲ್ಲಿ ಚುನಾವಣಾ ಆಯೋಗವು ಮತದಾರರ ವಿಶೇಷ ಪರಿಷ್ಕರಣೆ ಕಾರ್ಯ ನಡೆಸಿಲ್ಲ. ಇಲ್ಲಿಯವರೆಗೆ ಆಯೋಗ ಸಕಾರಣ ನೀಡಿಲ್ಲ. ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ವಿಶೇಷ ಪರಿಷ್ಕರಣೆಯ ಹೆಸರಿನಲ್ಲಿ ಕೆಲವು ರಾಜಕೀಯ ಪಕ್ಷಗಳನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಇದರಿಂದ ಚುನಾವಣಾ ಫಲಿತಾಂಶವು ಏರುಪೇರಾಗಿದೆ. ಕರ್ನಾಟಕದಲ್ಲಿ ಅಂತಹ ಯಾವುದೇ ಅಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಕೋರಿದ್ದಾರೆ.

ಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆಗೆ ಸಾಕಷ್ಟು ಸಮಯವಿದ್ದು, ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯದ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಬೇಕು. ಸಾಂವಿಧಾನಿಕ ಮೌಲ್ಯಗಳನ್ನು ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕೆಪಿಸಿಸಿ ನೀಡಿದ ಎಂಟು ಅಂಶಗಳು

* 2008ರ ಕ್ಷೇತ್ರ ಪುನರ್ ವಿಂಗಡಣೆಯಿಂದ ಹಲವು ವಿಧಾನಸಭಾ ಕ್ಷೇತ್ರಗಳು ಅಸ್ತಿತ್ವ ಕಳೆದುಕೊಂಡಿದ್ದು ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ 2002ರ ಮತದಾರರ ಪಟ್ಟಿಗೆ ಹೊಂದಾಣಿಕೆಯಾಗದ ಮತದಾರರು * ಮೂಲತಃ ಕರ್ನಾಟಕದಲ್ಲಿ ಜನಿಸಿ ಮತದಾರರ ಪಟ್ಟಿಯನ್ನು ಬೇರೆ ವಿಧಾನಸಭಾ ಕ್ಷೇತ್ರಗಳಿಗೆ ಬದಲಾಯಿಸಿಕೊಂಡವರು * ಮದುವೆ ಶಿಕ್ಷಣ ಅಥವಾ ಉದ್ಯೋಗದ ಕಾರಣಕ್ಕಾಗಿ ಕ್ಷೇತ್ರ ಬದಲಾವಣೆ ಆಗಿರುವ ಮಹಿಳೆಯರು * ವರ್ಗಾವಣೆಯ ಕಾರಣಕ್ಕಾಗಿ ಬೇರೆ ಕ್ಷೇತ್ರಗಳಿಗೆ ಬದಲಾವಣೆ ಆಗಿರುವ ಸರ್ಕಾರಿ ನೌಕರರು * ವ್ಯಾಪಾರ ಉದ್ಯೋಗ ಅಥವಾ ಜೀವನೋಪಾಯಕ್ಕಾಗಿ ಸ್ಥಳಾಂತರಗೊಂಡಿರುವವರು * ಕರ್ನಾಟಕದಲ್ಲಿ ಜನಿಸಿ ವಾಸಿಸುತ್ತಿರುವ ಮತದಾರರು * ಅಲೆಮಾರಿ ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಮತದಾರರು * ಸ್ಥಳೀಯ ಸಂಸ್ಥೆ ಸರ್ಕಾರಿ ಅರೆ ಸರ್ಕಾರಿ ಸಂಸ್ಥೆಗಳಿಂದ ವಾಸ ದೃಢೀಕರಣ ಹೊಂದಿರುವವರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.