ಬೆಂಗಳೂರು: ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ನೀಡಿದ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಅವರಿಗೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ನೋಟಿಸ್ ನೀಡಿದೆ.

‘ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವ ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದೀರಿ. ನಿಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿದೆ. ನಿಮ್ಮ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಲಾಗಿದೆ. ಈ ನೋಟಿಸ್ ತಲುಪಿದ 7 ದಿನಗಳಲ್ಲಿ ನಿಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

‘ಎಚ್ಚರಿಕೆ ನೀಡಿದರೂ, ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ನೀಡಿರುವ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಅವರಿಗೆ ನೋಟಿಸ್ ನೀಡಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶನಿವಾರ ಹೇಳಿದ್ದರು.

‘ಮುಖ್ಯಮಂತ್ರಿ ಅಧಿಕಾರ, ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತಾಡಬಾರದು. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಮೂಡಿಸಬಾರದು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಆದರೂ, ಶಿವಗಂಗಾ ಅವರು ದಾವಣಗೆರೆಯಲ್ಲಿ ಹೇಳಿಕೆ ನೀಡಿದ್ದಾರೆ. ಇದು ಪಕ್ಷದ ಶಿಸ್ತಿನ ಉಲ್ಲಂಘನೆ’ ಎಂದಿದ್ದರು.
.ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜುಗೆ ನೋಟಿಸ್: ಡಿ.ಕೆ. ಶಿವಕುಮಾರ್.ಡಿಸೆಂಬರ್ನಲ್ಲಿ ಡಿಕೆಶಿ ಮುಖ್ಯಮಂತ್ರಿ: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು.ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್.ಶೀಘ್ರವೇ ಡಿಕೆಶಿ ಸಿಎಂ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ: ಬಸವರಾಜು ಶಿವಗಂಗಾ.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ರೇಣುಕಾಚಾರ್ಯ ಬೆಂಬಲ: MLA ಶಿವಗಂಗಾ.ಯಾವುದೇ ಕಾರಣಕ್ಕೂ ಜಾತಿ ಗಣತಿ ಒಪ್ಪುವುದಿಲ್ಲ: ಕಾಂಗ್ರೆಸ್ MLA ಬಸವರಾಜು ಶಿವಗಂಗಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.