ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಮುನ್ನೆಲೆಗೆ

Published 23 ಮೇ 2024, 0:53 IST
Last Updated 23 ಮೇ 2024, 0:53 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ ಮತ್ತು ಸತೀಶ ಜಾರಕಿಹೊಳಿ ಅವರು ಈ ಕುರಿತು ತಮ್ಮ ಅಭಿಪ್ರಾಯಗಳನ್ನು ಹೊರಹಾಕುವ ಮೂಲಕ ಚರ್ಚೆಗೆ ಚಾಲನೆ ನೀಡಿದ್ದಾರೆ.

ಇತ್ತೀಚೆಗೆ ನಡೆದ ಪಕ್ಷದ ಸಭೆಗಳಲ್ಲಿ ಕೆಪಿಸಿಸಿ ಜವಾಬ್ದಾರಿಯಿಂದ ಹೊರಬರುವ ಇಂಗಿತವನ್ನು ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ವ್ಯಕ್ತಪಡಿಸಿದ ಬೆನ್ನಲ್ಲೇ ಈಗ ಚರ್ಚೆ ಆರಂಭವಾಗಿದೆ. 

ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹುದ್ದೆಯ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಲೋಕಸಭಾ ಚುನಾವಣೆವರೆಗೆ ನಿಭಾಯಿಸುವಂತೆ ಪಕ್ಷದ ಹೈಕಮಾಂಡ್‌ ಶಿವಕುಮಾರ್ ಅವರಿಗೆ ಸೂಚಿಸಿತ್ತು. ಲೋಕಸಭಾ ಚುನಾವಣೆ ಸದ್ಯವೇ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಶಿವಕುಮಾರ್ ಅವರು ‘ಅಧ್ಯಕ್ಷ ಹುದ್ದೆಯಲ್ಲಿ ಎಷ್ಟು ದಿನ ಮುಂದುವರಿಯುತ್ತೇನೊ ಎಂಬುದು ಗೊತ್ತಿಲ್ಲ, ಬದಲಾವಣೆ ಆಗಲೂಬಹುದು’ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. 

ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆಗಳಿಗೆ ತಯಾರಿ ನಡೆಸಬೇಕಾಗಿರುವುದರಿಂದ ಜವಾಬ್ದಾರಿ ಬೇರೊಬ್ಬರಿಗೆ ವಹಿಸುವುದು ಸೂಕ್ತ ಎಂಬ ಸಂದೇಶವನ್ನು ಶಿವಕುಮಾರ್ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

ಸುದ್ದಿಗಾರರ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದು ಸೂಕ್ತ ಎಂದು ಹೇಳಿದ್ದಾರೆ.

‘ಮೊದಲಿಗೆ ಅಧ್ಯಕ ಸ್ಥಾನ ಖಾಲಿ ಆಗಲಿ. ಅಧಿಕಾರ ಅವಧಿ ವಿಸ್ತರಣೆ ಆದರೂ ಅಚ್ಚರಿ ಇಲ್ಲ. ಒಂದು ವೇಳೆ ಬದಲಿಸುವುದಾದರೆ ಸಮರ್ಥರಿಗೆ, ಸಾಮರ್ಥ್ಯ ಇದ್ದವರಿಗೆ ಕೊಡಿ ಎಂದು ಕೇಳುತ್ತೇನೆ. ರಾಜ್ಯದ ಬಗ್ಗೆ ಗೊತ್ತಿರುವವರು ಮತ್ತು ರಾಜ್ಯ ಸುತ್ತಿದವರಿಗೆ ಕೊಡಿ ಎಂದು ಹೇಳುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT