ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮೇಶ್ವರ ಕೆಫೆ ಸ್ಫೋಟ | ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು: ಡಿಕೆಶಿ

Published 3 ಮಾರ್ಚ್ 2024, 15:52 IST
Last Updated 3 ಮಾರ್ಚ್ 2024, 15:52 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ರಾಮೇಶ್ವರ ಕೆಫೆ ಹೋಟೆಲ್‌ನಲ್ಲಿ ನಡೆದ ಸ್ಫೋಟ ವಿಚಾರವಾಗಿ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ನಾಯಕರು ಈ ವಿಚಾರವಾಗಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ರಾಜ್ಯ ಹಾಗೂ ಬೆಂಗಳೂರಿನ ಘನತೆಗೆ ಧಕ್ಕೆ ತರುತ್ತಿದ್ದಾರೆ. ಆ ಮೂಲಕ, ತಮ್ಮ ಗೌರವವನ್ನೂ ಹಾಳು ಮಾಡಿಕೊಳ್ಳುತ್ತಿದ್ದಾರೆ’ ಎಂದರು.

‘ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ತನಿಖೆ ವಿಚಾರದಲ್ಲಿ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದರು.

‘ಇದು ಬ್ರ್ಯಾಂಡ್‌ ಬೆಂಗಳೂರು ಅಲ್ಲ, ಬಾಂಬ್ ಬೆಂಗಳೂರು’ ಎಂಬ ಬಿಜೆಪಿ ಆರೋಪಕ್ಕೆ, ‘ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲ. ಸಮಯ ಪ್ರಜ್ಞೆ, ತಮ್ಮ ಜವಾಬ್ದಾರಿಯ ಅರಿವು ಇಲ್ಲದವರು ಈ ರೀತಿ ಮಾತನಾಡುತ್ತಾರೆ’ ಎಂದು ತಿರುಗೇಟು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT