ಕನಕಪುರ: ತಮ್ಮ ಊರಿಗೆ ಸಮೀಪದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಭಾನುವಾರ ಈಜಾಡಿ ಸಂಭ್ರಮಿಸಿದ್ದಾಗಿಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿರುವ ಅವರು,‘40 ವರ್ಷಗಳ ನಂತರ ಭಾನುವಾರ ಸಂಜೆ 4:30ಕ್ಕೆ ನಮ್ಮ ಹಳ್ಳಿಯ ಬಳಿ ಕಾವೇರಿ ನದಿಯಲ್ಲಿ ಈಜಾಡಿ ನಾನು ಕೆಲ ಸಮಯ ಕಳೆದದ್ದು ನಿಜಕ್ಕೂ ಸಂತಸ ನೀಡಿದೆ. ನನ್ನ ಶಾಲಾ ಹಾಗೂ ಕಾಲೇಜು ದಿನಗಳಲ್ಲಿ ನಾನು ಮತ್ತು ನನ್ನ ತಂದೆಯೊಂದಿಗೆ ಇದೇ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದ ಮತ್ತು ನದಿಯಲ್ಲಿ ಈಜಾಡುತ್ತಿದ್ದ ಕ್ಷಣಗಳು ಮತ್ತೊಮ್ಮೆ ಕಣ್ಣ ಮುಂದೆ ಹಾದುಹೋದವು.’ ಎಂದು ಬರೆದುಕೊಂಡಿದ್ದಾರೆ.

ಮುಂದುವರಿದು, ‘ಸೂರ್ಯ ಗ್ರಹಣ ಮುಗಿದ ನಂತರ, ನನ್ನ ಕುಟುಂಬದೊಂದಿಗೆ ಈಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದೆ’ ಎಂದೂ ತಿಳಿಸಿದ್ದಾರೆ.

ಈ ಚಿತ್ರಗಳನ್ನು 6.4 ಸಾವಿರಕ್ಕೂ ಹೆಚ್ಚು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವ್ಯಕ್ತಿಯೊಬ್ಬರು, ‘ನಿಮ್ಮ ರಾಜಕೀಯ ಒತ್ತಡ ಎಷ್ಟೇ ಇರಲಿ ಅದರಾಚೆ ನಿಮಗು ಒಂದು ಬದುಕಿದೆ. ಕುಟುಂಬದ ಜೊತೆ ಒಂದಷ್ಟು ಇಂತಹ ಸಮಯಗಳನ್ನು ಹೆಚ್ಚು ಕಳೆಯಿರಿ’ ಎಂದು ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.