‘ಮುಡಾ ವಿಷಯದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ಮಾಡುವ ಅಗತ್ಯವಿಲ್ಲ. ಹಣಕಾಸಿನ ವ್ಯವಹಾರದಲ್ಲಿ ವ್ಯತ್ಯಾಸವಾದಾಗ ಮಾತ್ರ ಅವರು ಪ್ರವೇಶಿಸಬೇಕು. ಆದರೆ, ಕೇಂದ್ರ ಬಿಜೆಪಿ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಣಿಯಲು ಇ.ಡಿ.ಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಇದರಲ್ಲಿ ಬಿಜೆಪಿ ಸಫಲವಾಗುವುದಿಲ್ಲ’ ಎಂದು ಬಾಲಕೃಷ್ಣ ಕಿಡಿಕಾರಿದರು.