ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ವಕ್ತಾರರಾಗಿ ಆಯನೂರು ನೇಮಕ

Published 12 ಅಕ್ಟೋಬರ್ 2023, 15:51 IST
Last Updated 12 ಅಕ್ಟೋಬರ್ 2023, 15:51 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಆಯನೂರು ಮಂಜುನಾಥ್‌ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಲಾಗಿದೆ.

‘ಕಾಂಗ್ರೆಸ್‌ ಪಕ್ಷದ ವಿಚಾರಧಾರೆಗಳನ್ನು ಮತ್ತು ಸರ್ಕಾರದ ಯೋಜನೆಗಳನ್ನು ಮಾಧ್ಯಮಗಳಲ್ಲಿ ಬಿಂಬಿಸಬೇಕೆಂಬ ಉದ್ದೇಶದಿಂದ ಆಯನೂರು ಮಂಜುನಾಥ್‌ ಅವರಿಗೆ ಈ ಹೊಣೆಗಾರಿಕೆ ನೀಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಬಿಜೆಪಿ ಸದಸ್ಯರಾಗಿದ್ದ ಆಯನೂರು ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದರು. ಆದರೆ, ಬಿಜೆಪಿ ಟಿಕೆಟ್‌ ಸಿಗದ ಕಾರಣ ಜೆಡಿಎಸ್‌ ಸೇರಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸೋಲು ಕಂಡ ಕಾರಣ ಕಾಂಗ್ರೆಸ್‌ ಕದ ತಟ್ಟಿದ್ದ ಅವರು, ವಿಧಾನ ಪರಿಷತ್‌ಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯೂ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT