ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಯುವ ಇಂಟಕ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ್ ನೇಮಕ

Published 30 ಮಾರ್ಚ್ 2024, 14:28 IST
Last Updated 30 ಮಾರ್ಚ್ 2024, 14:28 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿ ಯುವ ಇಂಟಕ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಜಿ. ಚಂದ್ರಶೇಖರ್ ನೇಮಕಗೊಂಡಿದ್ದಾರೆ.

ವಿಧಾನಪರಿಷತ್ ಸದಸ್ಯದ ಸಲೀಂ ಅಹಮದ್, ಬಿಎಂಟಿಸಿ ಮಾಜಿ ಉಪಾಧ್ಯಕ್ಷ ವಿ. ಎಸ್. ಆರಾಧ್ಯ, ಬಿಬಿಎಂಪಿ ಮಾಜಿ ಸದಸ್ಯ ಮೋಹನ್ ಕುಮಾರ್‌ ಮತ್ತು ಯುವ ಇಂಟಕ್ ಅಧ್ಯಕ್ಷ ಟಿ.ವೈ. ಅರುಣ್ ಅವರು ಚಂದ್ರಶೇಖರ್‌ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಚಂದ್ರಶೇಖರ್, ‘ಇಂಟಕ್ ವಿಭಾಗದಿಂದ ಶ್ರಮಿಕ ವರ್ಗದವರ ಸದಸ್ಯತ್ವ ಮಾಡಿಕೊಳ್ಳಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಮಿಕ ವರ್ಗವನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ತಲುಪಿಸಲಾಗುವುದು’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT