ಬೆಂಗಳೂರು: ರಾಜ್ಯದ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ (ಕೆಪಿಸಿಎಲ್) ಮಹಿಳಾ ಸಿಬ್ಬಂದಿ ಮತ್ತು ಅಧಿಕಾರಿಗಳ ಸಾಧನೆಯನ್ನು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತ ಶ್ಲಾಘಿಸಿದ್ದಾರೆ.

ಕೆಪಿಸಿಎಲ್ ವತಿಯಿಂದ ಭಾರತೀಯ ವಿದ್ಯಾಭವನದ ಖಿಂಚಾ ಸಭಾಂಗಣದಲ್ಲಿ ಗುರುವಾರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿರುವ ಗುಪ್ತ, ‘ರಾಜ್ಯಕ್ಕೆ ಬೇಕಾದ ವಿದ್ಯುತ್ ಉತ್ಪಾದನೆ ಮಾಡುವ ಕೆಪಿಸಿಎಲ್ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಮಹಿಳಾ ಅಧಿಕಾರಿಗಳು, ಸಿಬ್ಬಂದಿ ಇದ್ದಾರೆ. ಪುರುಷರಿಗಿಂತ ಕಮ್ಮಿ ಇಲ್ಲ ಎಂಬ ರೀತಿಯಲ್ಲಿ ಕೆಲಸ ಮಾಡಿ ಗರಿಷ್ಠ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಗೆ ಶ್ರಮಿಸಿದ್ದಾರೆ’ ಎಂದು ಹೇಳಿದರು.

‘40 ವರ್ಷಗಳ ಹಿಂದೆ ನಾನು ಐಐಟಿಯಲ್ಲಿ ಓದುತ್ತಿದ್ದಾಗ 300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ಕೇವಲ 8 ಮಂದಿ ಹೆಣ್ಣು ಮಕ್ಕಳಿದ್ದರು. ಆದರೆ, ಈಗ ಕಾಲ ಬದಲಾಗಿದೆ. ಸಾಕಷ್ಟು ಹೆಣ್ಣು ಮಕ್ಕಳು ಇಂಜಿನಿಯರಿಂಗ್ ಓದಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಕೆಪಿಸಿಎಲ್ನಲ್ಲೂ ಸಾಕಷ್ಟು ಮಹಿಳಾ ಇಂಜಿನಿಯರ್ಗಳು ನಾಯಕತ್ವ ವಹಿಸಿ ಕೆಲಸ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.

ಮಹಿಳಾ ದಿನದ ಅಂಗವಾಗಿ ರಂಗಕರ್ಮಿ, ನಟಿ, ಸಂಚಾರಿ ಥಿಯೇಟರ್ ಸಂಸ್ಥಾಪಕಿ ಮಂಗಳಾ ಎನ್. ಅವರನ್ನು ಗೌರವಿಸಲಾಯಿತು. ಮಹಿಳಾ ದಿನಾಚರಣೆ ಅಂಗವಾಗಿ ನಿಗಮದ ಮಹಿಳಾ ಸಿಬ್ಬಂದಿಗೆ ಆಯೋಜಿಸಿದ್ದ ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕೆಪಿಸಿಎಲ್ ಹಣಕಾಸು ನಿರ್ದೇಶಕರಾದ ಆರ್. ನಾಗರಾಜ, ತಾಂತ್ರಿಕ ನಿರ್ದೇಶಕರಾದ ಎಂ.ಆರ್.ಗಂಗಾಧರ್, ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ರೇಖಾ ಟಿ., ಕೆಪಿಸಿಎಲ್ ಮುಖ್ಯ ಜಾಗೃತ ಅಧಿಕಾರಿ ಸಿರಿಗೌರಿ ಡಿ.ಜಿ. ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.