ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿಗೆ ಶಿವನಗೌಡ ಸದಸ್ಯ

Published 10 ಜೂನ್ 2024, 16:00 IST
Last Updated 10 ಜೂನ್ 2024, 16:00 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರಾಗಿ ಅಬಕಾರಿ ಇಲಾಖೆಯ ನಿವೃತ್ತ ಉಪ ಆಯುಕ್ತ ಶಿವನಗೌಡ ಅವರನ್ನು ನೇಮಿಸಿ ಅಧಿಸೂಚನೆ ಹೊರಡಿಸಲಾಗಿದೆ.

ರಾಯಚೂರು ಜಿಲ್ಲೆ ದೇವದುರ್ಗದ ಜಾಲಹಳ್ಳಿಯವರಾದ, ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಶಿವನಗೌಡ ಅವರನ್ನು ಅವರನ್ನು ಅಧಿಕಾರಿ ವಿಭಾಗದಿಂದ ಖಾಲಿ ಇರುವ ಸದಸ್ಯ ಸ್ಥಾನಕ್ಕೆ ನೇಮಿಸಲಾಗಿದೆ.

ಮಾರ್ಚ್‌ 12ರಂದೇ ಶಿವನಗೌಡ ಅವರನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ನೇಮಿಸಿ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಿಪ್ಪಣಿ ಕಳುಹಿಸಿದ್ದರು. ಲೋಕಸಭೆ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿ ಇದ್ದುದರಿಂದ ನೇಮಕ ಅಧಿಸೂಚನೆ ಸೂಚನೆ ಪ್ರಕಟ ಆಗಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT