ಪೂರ್ವಭಾವಿ ಪರೀಕ್ಷೆಯನ್ನು ಮೇ 5ರಂದು ನಡೆಸಲು ಮೊದಲು ತೀರ್ಮಾನಿಸಲಾಗಿತ್ತು. ಲೋಕಸಭೆ ಚುನಾವಣೆ ಘೋಷಣೆಯಾದ ಕಾರಣ ನಂತರ ಜುಲೈ 7ಕ್ಕೆ ಮುಂದೂಡಲಾಗಿತ್ತು. ಆದರೆ, ಜುಲೈ 7ರಂದು ಕೇಂದ್ರ ಲೋಕಸೇವಾ ಆಯೋಗದ ಇಪಿಎಫ್‌ಒ ಪರೀಕ್ಷೆ ನಿಗದಿಯಾಗಿರುವುದರಿಂದ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಕೆಪಿಎಸ್‌ಸಿಗೆ ಹಲವು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದರು.