ಬೆಂಗಳೂರು: 2023–24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ 384 ಹುದ್ದೆಗಳಿಗೆ ನೇಮಕಾತಿಯ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಜಾಲತಾಣದಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಮೇ 3, 5, 7 ಮತ್ತು 9ರಂದು ಮುಖ್ಯ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ವೇಳಾಪಟ್ಟಿ ಆಯೋಗದ ಜಾಲತಾಣದಲ್ಲಿ ಲಭ್ಯವಿದೆ ಎಂದು ಕೆಪಿಎಸ್ಸಿ ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸಲು ಅವಕಾಶ: ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ಇದ್ದ ಭಾಷಾಂತರ ದೋಷದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ 34 ಅಭ್ಯರ್ಥಿಗಳು, ಮೇ ತಿಂಗಳಿನಲ್ಲಿ ನಡೆಯಲಿರುವ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು ಎಂದು ಕೆಪಿಎಸ್ಸಿ ಪ್ರಕಟಣೆ ತಿಳಿಸಿದೆ.

ಮುಖ್ಯ ಪರೀಕ್ಷೆ ಬರೆಯಲು ಈ ಅಭ್ಯರ್ಥಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಅವಕಾಶ ಕಲ್ಪಿಸಿದೆ. ಅವರು ಆಯೋಗದ ಜಾಲತಾಣದಲ್ಲಿ ಡೌನ್ಲೋಡ್ ಮಾಡಿಕೊಂಡ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಪರೀಕ್ಷಾ ಶುಲ್ಕ ಪಾವತಿಸಿ, ಇದೇ ಏಪ್ರಿಲ್ 28ರ ಒಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.