ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ ಸದಸ್ಯರಾಗಿ ಕಾವಲ್ಲಮ್ಮ ನೇಮಕ

Published 6 ಮಾರ್ಚ್ 2024, 15:32 IST
Last Updated 6 ಮಾರ್ಚ್ 2024, 15:32 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರಾಗಿ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನ ಇತಿಹಾಸ ವಿಭಾಗದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕಿಯೂ, ಪ್ರಾಧ್ಯಾಪಕಿಯೂ ಆಗಿರುವ ಆರ್‌. ಕಾವಲ್ಲಮ್ಮ ಅವರನ್ನು ನೇಮಿಸಿ ಅಧಿಸೂಚನೆ ಹೊರಡಿಸಲಾಗಿದೆ.

ತುಮಕೂರು ಜಿಲ್ಲೆ ಮಧುಗಿರಿಯವರಾದ ಕಾವಲ್ಲಮ್ಮ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ, ಎಂ.ಫಿಲ್‌ ಮತ್ತು ಪಿಎಚ್‌.ಡಿ ಪಡೆದಿದ್ದಾರೆ. ಅವರನ್ನು ಅಧಿಕಾರಿ ವಿಭಾಗದಲ್ಲಿ ಖಾಲಿ ಇರುವ ಸದಸ್ಯ ಸ್ಥಾನಕ್ಕೆ ನೇಮಿಸಲಾಗಿದೆ.

ಕೆಪಿಎಸ್‌ಸಿಗೆ ಅಧ್ಯಕ್ಷರು ಮತ್ತು 15 ಸದಸ್ಯರ ನೇಮಕಕ್ಕೆ ಅವಕಾಶವಿದೆ. ಸದ್ಯ ಅಧ್ಯಕ್ಷರು ಮತ್ತು 10 ಸದಸ್ಯರಿದ್ದಾರೆ. ಕಾವಲ್ಲಮ್ಮ ಅವರ ನೇಮಕದ ನಂತರವೂ ನಾಲ್ಕು ಸದಸ್ಯ ಸ್ಥಾನಗಳು ಖಾಲಿ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT