ಈ ಹುದ್ದೆಗಳ ನೇಮಕಾತಿಗೆ ಆಗಸ್ಟ್ 27ರಂದು ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆದರೆ, ಪ್ರಶ್ನೆಪತ್ರಿಕೆ 1 ಮತ್ತು 2ರಲ್ಲಿನ ಪ್ರಶ್ನೆಗಳನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡಿದಾಗ ಹಲವು ತಪ್ಪುಗಳು ನುಸುಳಿದ್ದವು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಆಗ್ರಹಿಸಿದ್ದರು. ಈ ಬೇಡಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡಪರ ಸಂಘಟನೆಗಳೂ ದನಿಗೂಡಿಸಿದ್ದವು.