ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KPSC: ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ- ಬೆಲ್ಲದ

Published 10 ಫೆಬ್ರುವರಿ 2024, 10:12 IST
Last Updated 10 ಫೆಬ್ರುವರಿ 2024, 10:12 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದಾಗಿ ರಾಜ್ಯದ ವಿದ್ಯಾರ್ಥಿಗಳು ರೋಸಿಹೋಗಿದ್ದಾರೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ ಎಂದು ವಿಧಾನಸಭೆಯ ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ ಕಿಡಿಕಾರಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು , ಕೆಪಿಎಸ್‌ಸಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ನೊಂದ ವಿದ್ಯಾರ್ಥಿಗಳು ನನ್ನನ್ನು ಭೇಟಿ ಮಾಡಿ, ಈ ಅನ್ಯಾಯದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಮಾಡಿದರು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಎಲ್ಲೆಲ್ಲಿ ಕೊಳ್ಳೆ ಹೊಡೆಯಬಹುದೋ ಅಲ್ಲಲ್ಲಿ ತನ್ನೊಬ್ಬ ಏಜೆಂಟ್‌ಗಳನ್ನು ನೇಮಿಸುತ್ತದೆ, ಅದರಲ್ಲಿ ಶಿವಶಂಕರಪ್ಪ ಒಬ್ಬ. ಕೆಪಿಎಸ್‌ಸಿಯಲ್ಲಿನ ದುರಡಳಿತ, ಭ್ರಷ್ಟಾಚಾರಕ್ಕೆ ರಾಜ್ಯದ ವಿದ್ಯಾರ್ಥಿಗಳು ರೋಸಿಹೋಗಿದ್ದಾರೆ, ಅವರ ಭವಿಷ್ಯದೊಂದಿಗೆ ಆಟವಾಡುತ್ತಿರುವ ನಿಮಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಕೆಪಿಎಸ್‌ಸಿ ಹಾಲಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ರನ್ನು ಈ ಕೂಡಲೇ ಉಚ್ಛಾಟನೆ ಮಾಡಿ ಹಾಗೂ ಸೂಕ್ತ ತನಿಖೆಗೆ ಆದೇಶಿಸಿ, ದಕ್ಷ ಅಧಿಕಾರಿ ಕೆ.ಎಸ್‌ ಲತಾ ಕುಮಾರಿ ಅವರನ್ನು ಸ್ಥಾನದಲ್ಲಿ ಮುಂದುವರಿಸಿ. ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ನಡೆಸುತ್ತೇವೆ ಎಂದು ಬೆಲ್ಲದ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT