ಬೆಂಗಳೂರು: ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಗ್ರೂಪ್ ‘ಎ’ ವೃಂದದ 58 ಬ್ಯಾಕ್ಲಾಗ್ ಸೇರಿ ಒಟ್ಟು 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ಭರ್ತಿಗೆ ಇದೇ 9ರಂದು ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಸರಿ ಉತ್ತರಗಳನ್ನು ಕೆಪಿಎಸ್ಸಿ ಮಂಗಳವಾರ ಪ್ರಕಟಿಸಿದೆ.

‘ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್ ಕಾರ್ಯವನ್ನು ಕೇವಲ ಮೂರು ದಿನಗಳಲ್ಲಿ ಪೂರ್ಣಗೊಳಿಸಿ, ಕೆಪಿಎಸ್ಸಿ ಕೀ ಉತ್ತರಗಳನ್ನು ಪ್ರಕಟಿಸಿದೆ. ಮೌಲ್ಯಮಾಪನದ ಮೊದಲ ಹಂತದ ಪ್ರಕ್ರಿಯೆ ತ್ವರಿತವಾಗಿ ಮುಗಿದಿರುವುದರಿಂದ 1:3 ಅನುಪಾತದಲ್ಲಿ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನೂ ಶೀಘ್ರದಲ್ಲಿ ಬಿಡುಗಡೆ ಮಾಡಲು ಕೆಪಿಎಸ್ಸಿಗೆ ಸಾಧ್ಯವಾಗಲಿದೆ’ ಎಂದು ಹುದ್ದೆ ಆಕಾಂಕ್ಷಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದ ಮೂರು ಕೇಂದ್ರಗಳಲ್ಲಿ ಇದೇ 8ರಂದು ನಡೆದ ಕನ್ನಡ ಭಾಷಾ ಪರೀಕ್ಷೆಗೆ 629 ಹಾಗೂ 9ರಂದು ನಡೆದ ಸಾಮಾನ್ಯ ಪತ್ರಿಕೆ ಮತ್ತು ನಿರ್ದಷ್ಟ ಪತ್ರಿಕೆಯ ಪರೀಕ್ಷೆಗೆ 1,447 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಕೆಪಿಎಸ್ಸಿ ಅವಕಾಶ ಕಲ್ಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.