ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: ಕೆಆರ್‌ಐಡಿಎಲ್ EE ಝರಣಪ್ಪ ಚಿಂಚೋಳಿಕರ್ ಸೇವೆಯಿಂದ ವಜಾ

Published 3 ಜನವರಿ 2024, 14:44 IST
Last Updated 3 ಜನವರಿ 2024, 14:44 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳ ಕಾರ್ಯನಿರ್ವಹಣೆಯಲ್ಲಿ ಅವ್ಯವಹಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಐಡಿಎಲ್) ಇಲ್ಲಿನ ಕಾರ್ಯನಿರ್ವಾಹಕ ಎಂಜಿನಿಯರ್ ಝರಣಪ್ಪ ಎಂ. ಚಿಂಚೋಳಿಕರ್ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ.

ಬುಧವಾರ ಆದೇಶ ಹೊರಡಿಸಿರುವ ಕೆಆರ್‌ಐಡಿಎಲ್, ಝರಣಪ್ಪ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾ ಮಾಡುವ ಜೊತೆಗೆ ದುರ್ಬಳಕೆ ಮಾಡಿಕೊಂಡ ₹1,54,44,897 ಒಂದೇ ಕಂತಿನಲ್ಲಿ ಸಂಸ್ಥೆಯ ಬ್ಯಾಂಕ್‌ ಖಾತೆಗೆ ಜಮೆ ಮಾಡುವಂತೆ ಆದೇಶಿಸಿದೆ. ಈ ಆದೇಶ ತಪ್ಪಿದಲ್ಲಿ ನ್ಯಾಯಾಲಯದಲ್ಲಿ ‘ಸಿವಿಲ್‌ ಸೂಟ್‌’ ಮಾಡಿ ಹಣ ವಸೂಲಿ ಮಾಡಲಾಗುವುದು ಎಂದು ಕೆಆರ್‌ಐಡಿಎಲ್ ಶಿಸ್ತು ಕ್ರಮಾಧಿಕಾರಿ ತಿಳಿಸಿದ್ದಾರೆ.

ಝರಣಪ್ಪ ಯಲಬುರ್ಗಾ ಕ್ಷೇತ್ರದಲ್ಲಿ 2016–18ರ ಅವಧಿಯಲ್ಲಿ ಸುವರ್ಣ ಗ್ರಾಮ ಯೋಜನೆಯ ಕಾಮಗಾರಿಗಳನ್ನು ನಿರ್ವಹಿಸದೇ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್‌ 2020ರಲ್ಲಿ ದೂರು ನೀಡಿದ್ದರು. ಈ ದೂರಿನ ಅನ್ವಯ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆ ಸಂಸ್ಥೆಯಲ್ಲಿನ ಎಂಜಿನಿಯರ್‌ಗಳ ಅಧ್ಯಕ್ಷತೆಯಲ್ಲಿ ಪಂಚನಾಮೆ ಸಮಿತಿ ರಚಿಸಿತ್ತು. ಚಿಂಚೋಳಿಕರ್ ಇಲ್ಲಿನ ನಿವಾಸದಲ್ಲಿ ಕಳೆದ ಜೂನ್‌ನಲ್ಲಿ ಲೋಕಾಯುಕ್ತ ದಾಳಿಯೂ ಆಗಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT