ಬೆಂಗಳೂರು: ಮಾಜಿ ಸೈನಿಕರ ಕೋಟಾದ ಅಡಿ ನಿವೇಶನ ಕೋರಿ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಅರ್ಜಿಗಳು ಬಾಕಿ ಇವೆ ಎಂಬುದನ್ನು ಪರಿಗಣಿಸಿ ಈ ವರ್ಷಾಂತ್ಯದೊಳಗೆ ಬಡಾವಣೆ ನಿರ್ಮಿಸಿ ನಿವೇಶನ ಮಂಜೂರು ಮಾಡುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಭರವಸೆ ನೀಡಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಬಿ.ಪಿ.ಹರೀಶ್ ಅವರ ಪ್ರಶ್ನೆಗೆ ಈ ಆಶ್ವಾಸನೆ ನೀಡಿದರು.

ರಾಜ್ಯದಾದ್ಯಂತ ಎಲ್ಲಾ ಮಾಜಿ ಸೈನಿಕರಿಗೂ ಅರ್ಹತೆ ಆಧಾರದಲ್ಲಿ ನಿವೇಶನ ನೀಡಬೇಕು ಎಂಬುದು ಸರ್ಕಾರದ ಇಚ್ಛೆ. ಆದರೆ, ಈ ಯೋಜನೆಯ ಅನುಷ್ಠಾನಕ್ಕೆ ಜಮೀನಿನ ಅಗತ್ಯವಿದೆ. ವಾಸಯೋಗ್ಯ ಸ್ಥಳವನ್ನು ಗುರುತಿಸಿ ಬಡಾವಣೆ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಈಗ ಯಾವ ತಾಲ್ಲೂಕು, ಯಾವ ಜಿಲ್ಲೆಯಲ್ಲಿ ಎಷ್ಟು ಜನ ಮಾಜಿ ಸೈನಿಕರು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂಬ ದಾಖಲೆ ಬೆರಳ ತುದಿಯಲ್ಲಿದೆ. ಈ ಎಲ್ಲಾ ಅರ್ಜಿಗಳನ್ನೂ ಆನ್ಲೈನ್ ಮೂಲಕ ಡಿಜಿಟಲೀಕರಣ ಮಾಡಲಾಗಿದೆ. ಮೊದಲು ಈ ವ್ಯವಸ್ಥೆ ಇರಲಿಲ್ಲ. ನಿಖರ ದಾಖಲೆಗಳೂ ಲಭ್ಯ ಇರಲಿಲ್ಲ. ಯಾವ ತಾಲ್ಲೂಕಿನಲ್ಲಿ ಎಷ್ಟು ಅರ್ಜಿ ಇದೆ ಎಂದು ತಹಶೀಲ್ದಾರ್ಗೆ ಪತ್ರ ಬರೆಯಬೇಕಿತ್ತು. ಆದರೆ, ಪ್ರಸ್ತುತ ಎಲ್ಲವನ್ನೂ ಡಿಜಿಟಲೀಕರಣಗೊಳಿಸಲಾಗಿದೆ. ವರ್ಷಾಂತ್ಯದೊಳಗೆ ಮಾಜಿ ಸೈನಿಕರಿಗೆ ನಿವೇಶನ ನೀಡಲಾಗುವುದು ಎಂದರು.

ವಿಷಯ ಪ್ರಸ್ತಾಪಿಸಿದ ಹರೀಶ್ ಅವರು, ದಾವಣಗೆರೆ ಜಿಲ್ಲೆಯಲ್ಲಿ ಮಾಜಿ ಸೈನಿಕರಿಗೆ ತಾಲ್ಲೂಕು ಅಥವಾ ಜಿಲ್ಲಾ ಕೇಂದ್ರಗಳಲ್ಲಿ ನಿವೇಶನ ಕೊಡದೆ ಚಿರತೆ, ಕರಡಿಗಳು ಓಡಾಡುವ ಹಳ್ಳಿಗಾಡಿನ ಗುಡ್ಡ ಪ್ರದೇಶದಲ್ಲಿ ನಿವೇಶನ ನೀಡಿದ್ದಾರೆ. ಮಾಜಿ ಸೈನಿಕ ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.

ಕಂದಾಯ ಗ್ರಾಮಗಳ ಪ್ರಸ್ತಾವಕ್ಕೆ ಮಾ. 16 ಗಡುವು

ನೂತನ ಕಂದಾಯ ಗ್ರಾಮ, ಉಪಗ್ರಾಮ ರಚನೆಗೆ ಪ್ರಸ್ತಾವ ನೀಡಲು ಅಧಿಕಾರಿಗಳಿಗೆ ಮಾ. 16ರವರೆಗೆ ಗಡುವು ನಿಗದಿಪಡಿಸಲಾಗಿದೆ ಎಂದು ಕೃಷ್ಣಬೈರೇಗೌಡ ತಿಳಿಸಿದರು.

ಜೆಡಿಎಸ್ನ ಎಚ್.ಟಿ.ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವು ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ದಾಖಲೆ ರಹಿತ ವಸತಿ ಪ್ರದೇಶಗಳನ್ನು ಗುರುತಿಸಿ ಲಕ್ಷಾಂತರ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಸಹಕರಿಸಿದ್ದಾರೆ. ಆದರೆ, ಕೆಲವು ಅಧಿಕಾರಿಗಳ ಅಸಡ್ಡೆಯಿಂದಾಗಿ ಅರ್ಹತೆ ಇದ್ದರೂ ಹಲವು ವಸತಿ ಪ್ರದೇಶಗಳಿಗೆ ದಾಖಲೆ ನೀಡಲು ಸಾಧ್ಯವಾಗಿಲ್ಲ. ಎಲ್ಲಾ ಅರ್ಹ ಕಂದಾಯ ಗ್ರಾಮ–ಉಪಗ್ರಾಮ ರಚನೆಗೆ ಪ್ರಸ್ತಾವ ನೀಡುವಂತೆ ಅಧಿಕಾರಿಗಳಿಗೆ ಗಡುವು ನೀಡಲಾಗಿದೆ ಎಂದು ವಿವರಿಸಿದರು.

ಕೃಷ್ಣ ಉತ್ತರಕ್ಕೆ ಜಯಚಂದ್ರ ಅಸಮಾಧಾನ

ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ ಜಮೀನು ಮಂಜೂರು ಮಾಡಬೇಕು ಎಂಬ ಸರ್ಕಾರದ ಉದ್ದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಾನೂನು ನಿಯಮಗಳನ್ನು ಮೀರಲೂ ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.

ಕಾಂಗ್ರೆಸ್ನ ಟಿ.ಬಿ.ಜಯಚಂದ್ರ ಅವರ ಪ್ರಶ್ನೆಗೆ ಉತ್ತರಿದ ಅವರು, ‘ಸೇಂದಿವನ ಪ್ರದೇಶವನ್ನು ಬಗರ್ ಹುಕುಂ ಯೋಜನೆ ಅಡಿ ರೈತರಿಗೆ ಮಂಜೂರು ಮಾಡಬೇಕು ಎಂಬ ಬೇಡಿಕೆ ಬಗ್ಗೆ ಸಹಾನುಭೂತಿ ಇದೆ. ಈ ಬಗ್ಗೆ ಸಕಾರಾತ್ಮಕವಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ಉದ್ದೇಶವೂ ಇದೆ. ಆದರೆ, ಸೇಂದಿ ವನ ಜಮೀನನ್ನು ಅಬಕಾರಿ ಇಲಾಖೆಯಿಂದ ಕಂದಾಯ ಇಲಾಖೆಗೆ ವರ್ಗಾವಣೆ ಮಾಡುವಾಗ 2003 ರಲ್ಲಿ ಅಂದಿನ ಸರ್ಕಾರ ರೂಪಿಸಿದ ಐದು ನಿಯಮಗಳು ಇಂದು ತೊಡಕಾಗಿ ಪರಿಣಮಿಸಿವೆ’ ಎಂದರು. ಸಚಿವರ ಉತ್ತರದಿಂದ ಸಮಾಧಾನಗೊಳ್ಳದ ಜಯಚಂದ್ರ ಅವರು, ‘ಹಿಂದೆ ನಾನು ಸಚಿವನಾಗಿದ್ದಾಗಲೇ( 2001), ಸೇಂದಿವನ ಭೂಮಿಯನ್ನು ಬಗರ್ಹುಕುಂ ಅಡಿ ಹಂಚಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸ
ಲಾಗಿತ್ತು. ಅದನ್ನು ಪರಿಶೀಲಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.