ಬೆಂಗಳೂರು: ‘ನಾನು ಪ್ರತಿನಿಧಿಸುವ ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ತಕರಾರು ಪ್ರಕರಣಗಳು ವಿಲೇ ಆಗುತ್ತಿಲ್ಲ. ಜನ ನನ್ನನ್ನು ಪ್ರಶ್ನಿಸುತ್ತಾರೆ. ಅಧಿಕಾರಿ ಮಾಡುವ ತಪ್ಪಿಗೆ ನಾನು ತಲೆ ತಗ್ಗಿಸುವಂತಾಗಿದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ರಾಜ್ಯದ ಎಲ್ಲ ಉಪ ವಿಭಾಗಾಧಿಕಾರಿಗಳ ಜತೆ ವಿಡಿಯೊ ಸಂವಾದದ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿ ಅಸಹಾಯಕತೆ ವ್ಯಕ್ತಪಡಿಸಿದರು.

‘ಉತ್ತರ ಜಿಲ್ಲೆಯ ವಿಶೇಷ ಉಪ ವಿಭಾಗಾಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಆದರೆ, ಉಪ ವಿಭಾಗಾಧಿಕಾರಿ ಕಿರಣ್ ಮಾತ್ರ ಆದೇಶಕ್ಕಾಗಿ ಕಾಯ್ದಿರಿಸಿದ ಪ್ರಕರಣಗಳನ್ನೂ ವಿಲೇ ಮಾಡುತ್ತಿಲ್ಲ. ಪರಿಣಾಮ ಜನ ಸಾಮಾನ್ಯರು ಪ್ರತಿನಿತ್ಯ ನನ್ನ ಗೃಹ ಕಚೇರಿಗೆ ಬಂದು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಯಾರೋ ಒಬ್ಬ ಅಧಿಕಾರಿ ಮಾಡುವ ತಪ್ಪಿಗೆ ಜನರ ಎದುರು ನಾನು ತಲೆ ತಗ್ಗಿಸುವಂತಾಗಿದೆ. ಇಂತಹ ಅಧಿಕಾರಿಗಳಿಂದಾಗಿ ಒಳ್ಳೆಯ ಕೆಲಸ ಮಾಡುವ ಅಧಿಕಾರಿಗಳಿಗೂ ಕೆಟ್ಟ ಹೆಸರು ಬರುತ್ತದೆ’ ಎಂದು ಕಿಡಿಕಾರಿದರು.

‘ಅತಿ ಹೆಚ್ಚು ಪ್ರಕರಣಗಳು ಬಾಕಿ ಇದ್ದ ತುಮಕೂರು, ದೊಡ್ಡಬಳ್ಳಾಪುರ, ತರೀಕೆರೆ, ಕೋಲಾರ ಸೇರಿದಂತೆ ಹಲವು ಉಪ ವಿಭಾಗಾಧಿಕಾರಿ(ಎ.ಸಿ) ವಲಯಗಳು ಪ್ರಸ್ತುತ ಸುಧಾರಣೆ ಕಂಡಿವೆ. ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ಸಾಕಷ್ಟು ಪ್ರಕರಣಗಳು ಬಾಕಿ ಇವೆ’ ಎಂದು ಹೇಳಿದರು.

ರಾಜ್ಯದ ವಿವಿಧ ಉಪ ವಿಭಾಗಾಧಿಕಾರಿಗಳ (ಎ.ಸಿ) ನ್ಯಾಯಾಲಯಗಳಲ್ಲಿ ಬಾಕಿ ಇದ್ದ ತಕರಾರು ಪ್ರಕರಣಗಳ ಪೈಕಿ ಶೇ 90ಕ್ಕೂ ಹೆಚ್ಚು ಪ್ರಕರಣಗಳನ್ನು ಕಳೆದ ಮೂರು ವರ್ಷಗಳಲ್ಲಿ ಇತ್ಯರ್ಥಪಡಿಸಲಾಗಿದೆ ಎಂದರು.

‘ಮೂರು ವರ್ಷಗಳ ಹಿಂದೆ ನಾನು ಕಂದಾಯ ಇಲಾಖೆ ಜವಾಬ್ದಾರಿ ಸ್ವೀಕರಿಸಿದ ವೇಳೆ ರಾಜ್ಯ ವ್ಯಾಪಿ ಸುಮಾರು 73,624 ಅವಧಿ ಮೀರಿದ ತಕರಾರು ಪ್ರಕರಣಗಳು ಬಾಕಿ ಇದ್ದವು. ಇದಕ್ಕೆ ಹತ್ತಾರು ವರ್ಷಗಳ ದುರಾಡಳಿತವೇ ಕಾರಣ. ಪರಿಣಾಮ ಜನ ಸಾಮಾನ್ಯರು ಅನಗತ್ಯವಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿತ್ತು. ಆದರೆ, ಆ ಸಂಖ್ಯೆಯನ್ನು ಇದೀಗ 7,490 ಕ್ಕೆ ಇಳಿಸಿದ್ದೇವೆ. ಆ ಮೂಲಕ ಶೇ 90 ಕ್ಕೂ ಹೆಚ್ಚು ಪ್ರಕರಣಗಳಿಗೆ ಮುಕ್ತಿ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಉಳಿದಿರುವ ಪ್ರಕರಣಗಳನ್ನೂ ಶೀಘ್ರವಾಗಿ ಇತ್ಯರ್ಥಪಡಿಸಬೇಕು’ ಎಂದು ಸೂಚನೆ ನೀಡಿದರು.

‘ಅಧಿಕಾರಿಗಳ ಸಹಕಾರದಿಂದ ಕಳೆದ ಮೂರು ವರ್ಷದಲ್ಲಿ ಕೋರ್ಟ್ ಕೇಸ್, ಪೌತಿಖಾತೆ, ಪೋಡಿ ದುರಸ್ತಿ , ಆರ್ಟಿಸಿ ತಿದ್ದುಪಡಿ, ಆಧಾರ್ ಸೀಡಿಂಗ್, ಇ–ಆಫೀಸ್ ಸೇರಿದಂತೆ ಕಂದಾಯ ಇಲಾಖೆಯಲ್ಲಿ ಸಾಕಷ್ಟು ಪ್ರಗತಿಯಾಗಿದೆ. ಆದರೆ, ಆಗಬೇಕಾದ ಕೆಲಸ ಇನ್ನಷ್ಟು ಬಾಕಿ ಇದೆ. ಹೀಗಾಗಿ ಅಧಿಕಾರಿಗಳು ಮತ್ತಷ್ಟು ಜನಪರವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಸೂಚಿಸಿದರು.

ಸಭೆಯಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ (ಕಂದಾಯ ಇಲಾಖೆ) ರಾಜೇಂದ್ರ ಕುಮಾರ್ ಕಟಾರಿಯಾ, ಹಿರಿಯ ಅಧಿಕಾರಿಗಳಾದ ಆಮ್ಲನ್ ಆದಿತ್ಯ ಬಿಸ್ಲಾಸ್, ಮುಲ್ಲೈ ಮುಗಿಲನ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.