ಬೆಂಗಳೂರು: ಕೃಷ್ಣಾ ಮೇಲ್ದಂಡೆ ಹಂತ– 3ರ ಯೋಜನೆಗಳ ಅನುಷ್ಠಾನಕ್ಕಾಗಿ ಅಗತ್ಯವಿರುವ ಭೂಸ್ವಾಧೀನದಿಂದ ಜಮೀನು ಕಳೆದುಕೊಳ್ಳುವವರಿಗೆ ಏಕಗಂಟಿನಲ್ಲಿ ಪರಿಹಾರದ ಮೊತ್ತ ಪಾವತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಆ ಭಾಗದ ರೈತರು, ಅಧಿಕಾರಿಗಳು, ಜನಪ್ರತಿನಿಧಿಗಳ ಜತೆ ಮಾತುಕತೆ ನಡೆಸಲು ಮುಖ್ಯಮಂತ್ರಿಯವರು ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿಸಿದ್ದಾರೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

‘ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಸುದೀರ್ಘ ಚರ್ಚೆ ನಡೆಯಿತು. ಆದಷ್ಟು ಬೇಗ ಪರಿಹಾರ ದರದ ವಿಷಯವನ್ನು ಇತ್ಯರ್ಥಗೊಳಿಸಬೇಕು. ಈಗಾಗಲೇ ವಿಳಂಬವಾಗಿರುವುದರಿಂದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ರಾಜ್ಯದ ಪಾಲಿನ ನೀರನ್ನು ಬಳಸಿಕೊಳ್ಳಬೇಕು ಎಂದು ಉತ್ತರ ಕರ್ನಾಟಕ ಭಾಗದ ಸಚಿವರು ಒತ್ತಾಯಿಸಿದರು’ ಎಂದು ಅವರು ಹೇಳಿದರು.

ಕೃಷ್ಣಾ ಮೇಲ್ದಂಡೆ ಹಂತ–3ರ ನೀರು ಹಂಚಿಕೆಯ ತೀರ್ಪು ಬಂದು 15 ವರ್ಷ ಕಳೆದಿದೆ. ಕೇಂದ್ರ ಸರ್ಕಾರ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಈ ಮಧ್ಯೆ ನ್ಯಾಯಮಂಡಳಿಯ ಅವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಿರುವ ಕ್ರಮ ಸರಿಯಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಇದನ್ನು ಪ್ರತಿಭಟಿಸಬೇಕು ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಯಿತು.

‘ನಮ್ಮ ಪಾಲಿನ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಮೂರನೇ ಹಂತದ ಯೋಜನೆಗಳ ಕಾಮಗಾರಿಗಳನ್ನು ಆರಂಭಿಸಿ ಸಕಾಲದಲ್ಲಿ ಪೂರ್ಣಗೊಳಿಸಬೇಕು. ಅದಕ್ಕೂ ಮೊದಲು ಭೂಸ್ವಾಧೀನದ ವಿಷಯವನ್ನು ಇತ್ಯರ್ಥಗೊಳಿಸಬೇಕು. ಪರಿಹಾರದ ಮೊತ್ತವನ್ನು ನಿರ್ಧರಿಸಲು ಅಧಿಕಾರಿಗಳು, ರೈತ ಮುಖಂಡರು ಮತ್ತು ಶಾಸಕರು ಸಭೆಯನ್ನು ಕರೆದು ಮಾತುಕತೆ ನಡೆಸಬೇಕು. ಈ ಕುರಿತು ಒಂದು ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟದ ಮುಂದಿಡಿ ಎಂದು ಸಿದ್ದರಾಮಯ್ಯ ಸೂಚಿಸಿದರು’ ಎಂದು ಪಾಟೀಲ ಹೇಳಿದರು.

ಕೃಷ್ಣಾ ನ್ಯಾಯಮಂಡಳಿ 2010ರಲ್ಲಿ ಕೃಷ್ಣಾ ನದಿ ನೀರಿನ ಹಂಚಿಕೆ ಮಾಡಿದೆ. ಆ ತೀರ್ಪಿನ ಪ್ರಕಾರ, ಶೇ 65 ರಷ್ಟು ಹೆಚ್ಚುವರಿ ಹರಿವನ್ನು ಅವಲಂಬಿಸಿ ಮಹಾರಾಷ್ಟ್ರಕ್ಕೆ 81 ಟಿಎಂಸಿ ಅಡಿ, ಕರ್ನಾಟಕಕ್ಕೆ 177 ಟಿಎಂಸಿ ಅಡಿ ಮತ್ತು ಆಂಧ್ರಪ್ರದೇಶಕ್ಕೆ 190 ಟಿಎಂಸಿ ಅಡಿ ನೀರು ಹಂಚಿಕೆ ಮಾಡಲಾಗಿದೆ. ಮೂರನೇ ಹಂತವನ್ನು ಅನುಷ್ಠಾನಗೊಳಿಸಿದರೆ, ಉತ್ತರ ಕರ್ನಾಟಕ ಭಾಗದ ವಿಜಯಪುರ, ಬಾಗಲಕೋಟೆ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.